Advertisement

ಕಿರೀಟ ಗೆದ್ದ ಕರುನಾಡ ಕುವರಿ: ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

09:25 AM Jul 04, 2022 | Team Udayavani |

ಮುಂಬೈ: 2022ನೇ  ಸಾಲಿನ ಮಿಸ್ ಇಂಡಿಯಾ ಸ್ಪರ್ಧೆಯ ವಿಜೇತರನ್ನು ಘೋಷಿಸಲಾಗಿದ್ದು, ಉಡುಪಿಯ ಇನ್ನಂಜೆಯ ಸಿನಿ ಶೆಟ್ಟಿ ಮಿಸ್ ಇಂಡಿಯಾ ಕಿರೀಟ ಗೆದ್ದಿದ್ದಾರೆ.

Advertisement

ಮಿಸ್ ಇಂಡಿಯಾ 2020 ತೆಲಂಗಾಣದ ಮಾನಸಾ ವಾರಣಾಸಿ ತನ್ನ ಉತ್ತರಾಧಿಕಾರಿ ಸಿನಿ ಶೆಟ್ಟಿಗೆ ಮಿಸ್ ಇಂಡಿಯಾ 2022 ಕಿರೀಟವನ್ನು ತೊಡಿಸಿದರು. ಈ ಕಾರ್ಯಕ್ರಮವು ಭಾನುವಾರ ಸಂಜೆ ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು.

ಇದನ್ನೂ ಓದಿ:ಕಾಫಿ ಶಾಪ್‌ ಸೇರಿದ ಟ್ವಿಟರ್‌ ಸಿಇಒ ಪರಾಗ್‌ ಅಗರ್ವಾಲ್‌ !

ಇನ್ನಂಜೆ ಮೂಲದವರಾದ ಸಿನಿ ಶೆಟ್ಟಿ ಅವರು ಮುಂಬೈನಲ್ಲಿ ಜನಿಸಿದವರು. ಆದರೆ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಸಿನಿ ಶೆಟ್ಟಿ ಪ್ರಸ್ತುತ ಚಾರ್ಟರ್ಡ್ ಫೈನಾನ್ಷಿಯಲ್ ಅನಾಲಿಸ್ಟ್ (ಸಿಎಫ್‌ಎ) ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು ಈಗ ಪ್ರತಿಷ್ಠಿತ 71 ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

Advertisement

ರಾಜಸ್ಥಾನದ ರೂಬಲ್ ಶೇಖಾವತ್ ಅವರು ಮಿಸ್ ಇಂಡಿಯಾ 2022 ರ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಉತ್ತರ ಪ್ರದೇಶದ ಶಿನಾತಾ ಚೌಹಾನ್ ಅವರು ಮಿಸ್ ಇಂಡಿಯಾ 2022 ರ ಎರಡನೇ ರನ್ನರ್ ಅಪ್ ಸ್ಥಾನ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next