Advertisement

ಉದ್ಯಾವರ: ಮನೆ ಕಳ್ಳತನ ಪ್ರಕರಣದ ಆರೋಪಿಯ ಬಂಧನ

10:10 PM Aug 23, 2023 | Team Udayavani |

ಕಾಪು: ಉದ್ಯಾವರ ಬೊಳ್ಜೆ ನಿವಾಸಿ ಅನಿತಾ ಡಿ’ಸಿಲ್ವ ಅವರ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಪೊಲೀಸರು ಬಂಧಿಸಿದ್ದು ಚಿನ್ನಾಭರಣ, ನಗದು, ಸ್ಕೂಟರ್‌ ಸಹಿತ 8 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Advertisement

ಕಟಪಾಡಿ ಏಣಗುಡ್ಡೆ ಗ್ರಾಮದ ಅಚ್ಚಡ ನಿವಾಸಿ ಜೋನ್‌ ಪ್ರಜ್ವಲ್‌ ಫೆರ್ನಾಂಡಿಸ್‌ (32) ಬಂಧಿತ ಆರೋಪಿ.

ಪ್ರಕರಣದ ವಿವರ
ಆ. 17ರಂದು ಉದ್ಯಾವರ ಬೊಳ್ಜೆಯ ಅನಿತಾ ಡಿ’ಸಿಲ್ವ ಬೆಳಗ್ಗೆ ಕೆಲಸಕ್ಕೆ ಹೋಗಿದ್ದು ಮಗ ಶಾಲೆಗೆ ತೆರಳಿದ್ದನು. ಮಗಳು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಕಂಪ್ಯೂಟರ್‌ ಕ್ಲಾಸ್‌ಗೆಂದು ಹೋಗಿದ್ದು ಸಂಜೆ 5ಕ್ಕೆ ಮನೆಗೆ ಮರಳಿದ ವೇಳೆ ಮನೆಗೆ ಕಳ್ಳರು ನುಗ್ಗಿದ್ದ ಘಟನೆ ಬೆಳಕಿಗೆ ಬಂದಿತ್ತು. ಮನೆಯ ಬೆಡ್‌ ರೂಮ್‌ನ ಕಪಾಟಿನ ಲಾಕರ್‌ನ್ನು ಮುರಿದ ಕಳ್ಳರು ಚಿನ್ನಾಭರಣ ಇಟ್ಟಿದ್ದ ಪೆಟ್ಟಿಗೆಯನ್ನು ಕದ್ದೊಯ್ದಿದ್ದರು. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಂಬಂಧಿಕನ ಮೇಲೆ ಸಂಶಯ ಆರೋಪಿ ಜೋನ್‌ ಪ್ರಜ್ವಲ್‌ ಫೆರ್ನಾಂಡಿಸ್‌ ಅನಿತಾ ಡಿ’ಸಿಲ್ವ ಅವರ ಸಂಬಂಧಿಕನಾಗಿದ್ದು ಆಗಾಗ್ಗೆ ಮನೆಗೆ ಬಂದು ಹೋಗುತ್ತಿದ್ದ. ತನಿಖೆ ಆರಂಭಿಸಿದ ಪೊಲೀಸರಿಗೆ ಜೋನ್‌ ಮೇಲೆ ಹೆಚ್ಚಿನ ಸಂಶಯ ವ್ಯಕ್ತವಾಗಿತ್ತು. ಆತನನ್ನೇ ಕೇಂದ್ರೀಕರಿಸಿ ತನಿಖೆ ಮುಂದುವರಿಸಿದ ಕಾಪು ಕ್ರೈಂ ಎಸ್‌ಐ ಪುರುಷೋತ್ತಮ್‌ ಮತ್ತು ಸಿಬಂದಿಗಳಾದ ಪ್ರವೀಣ್‌, ರಾಜೇಶ್‌ ಮತ್ತು ನಾರಾಯಣ್‌ ಅವರು ಅಚ್ಚಡ ಕ್ರಾಸ್‌ ಬಳಿ ಸ್ಕೂಟಿಯನ್ನು ಅಡ್ಡ ಹಾಕಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡ ವೇಳೆ ಹಣ, ಮತ್ತು ಬಂಗಾರ ಅಡವಿಟ್ಟ ಚೀಟಿಗಳು ದೊರಕಿದ್ದವು.

ಮದ್ಯ, ಇಸ್ಪೀಟ್‌, ಜೂಜಾಟದ ವ್ಯಸನ
ಆ ಬಳಿಕ ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ನೇತೃತ್ವದಲ್ಲಿ ವಿಚಾರಣೆಗೊಳಪಡಿಸಿದಾಗ ಅನಿತಾ ಅವರ ಮನೆಯಲ್ಲಿ ತಾನೇ ಕಳ್ಳತನ ನಡೆಸಿರುವುದಾಗಿ ಆರೋಪಿ ಬಾಯ್ಬಿಟ್ಟಿದ್ದನು. ಆತ ನೀಡಿದ ಮಾಹಿತಿಯತೆ ವಿವಿಧ ಸಹಕಾರಿ ಸಂಘಗಳು, ಫೈನಾನ್ಸ್‌ಗಳು, ಚಿನ್ನಾಭರಣ ಅಂಗಡಿಗಳಿಗೆ ತೆರಳಿದ ಪೊಲೀಸರು ಚಿನ್ನಾಭರಣಗಳನ್ನು ಸ್ವಾಧೀನಕ್ಕೆ ತೆಗೆದುಕೊಂಡಿದ್ದಾರೆ. ಮದ್ಯ ವ್ಯಸನ, ಸಾಲ ಮತ್ತು ಜೂಜಾಟದ ಸುಳಿಗೆ ಸಿಲುಕಿದ್ದ ಆರೋಪಿ ಚಿನ್ನಾಭರಣಗಳನ್ನು ಮಾರಾಟ ಮಾಡಿದ ಮತ್ತು ಒತ್ತೆಯಿಟ್ಟ ಹಣವನ್ನು ಇಸ್ಪೀಟ್‌, ಜೂಜಾಟ ಮತ್ತು ಮದ್ಯ ವ್ಯಸನಕ್ಕೆ ಬಳಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next