Advertisement

Udyavara; ಬೈಕ್‌ನಿಂದ ಬಿದ್ದು ಸಹ ಸವಾರೆ ಗಂಭೀರ

11:13 PM Oct 27, 2023 | Team Udayavani |

ಕಾಪು: ಬೈಕ್‌ನಿಂದ ಬಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉದ್ಯಾವರ ಅಂಕುದ್ರುವಿನಲ್ಲಿ ಗುರುವಾರ ನಡೆದಿದೆ.

Advertisement

ಉದ್ಯಾವರ ಅಂಕುದ್ರು ನಿವಾಸಿ ನಿರ್ಮಲಾ (61) ಅವರು ಗಂಭೀರವಾಗಿ ಗಾಯಗೊಂಡಿದ್ದು, ಮಿದುಳು ನಿಷ್ಕ್ರಿಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಉದ್ಯಾವರ ಬಿಲ್ಲವ ಸಂಘದಲ್ಲಿ ನಡೆದ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ದೂರದ ಸಂಬಂಧಿ ದಿನೇಶ್‌ ಅವರ ಜತೆಗೆ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಅವಘಡ ಸಂಭವಿಸಿದೆ.

ಅಪಘಾತದಿಂದ ರಸ್ತೆಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿನ ವೈದ್ಯರು ಮಿದುಳು ನಿಷ್ಕ್ರಿಯಗೊಂಡಿರುವುದನ್ನು ಖಚಿತಪಡಿಸಿದ್ದು, ಅನಂತರ ಅವರನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next