ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಮಾಪ್ಅಪ್ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದೆ.
ಇದಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಅ. 17ರ ಮಧ್ಯಾಹ್ನ 1 ಗಂಟೆ ಒಳಗೆ ಇ-ಮೇಲ್ ಮೂಲಕ ಸಲ್ಲಿಸಬಹುದು. ಆಕ್ಷೇಪಣೆಗಳನ್ನು ಪರಿಶೀಲಿಸಿದ ಅನಂತರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಮಾಪ್ಅಪ್ ಸುತ್ತಿಗೆ ಹಂಚಿಕೆಗೆ ಇದ್ದ 710 ವೈದ್ಯಕೀಯ ಸೀಟುಗಳ ಪೈಕಿ ಮ್ಯಾನೇಜ್ಮೆಂಟ್ ಕೋಟಾದ 70 ಸೀಟು ಬಿಟ್ಟು ಉಳಿದ ಎಲ್ಲ ಸೀಟು ಹಂಚಿಕೆಯಾಗಿವೆ ಎಂದು ತಿಳಿಸಿದ್ದಾರೆ.
ಬಿ.ಇಡಿ ಕೋರ್ಸ್ಗೆ ಅರ್ಜಿ ಆಹ್ವಾನ
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ರಾಜ್ಯದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರಕಾರಿ ಕೋಟಾ ಸೀಟುಗಳ ದಾಖಲಾತಿಗಾಗಿ ಆನ್ಲೈನ್ ಮೂಲಕ ನ.14ರ ವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ವೆಬ್ಸೈಟ್ https://schooleducation.karnataka.gov.in ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ದಾಖಲಾತಿ ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ ಸೇರಿ ಎಲ್ಲ ವಿವರ ಮತ್ತು ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆ¿ನ್ನು ಓದಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.