Advertisement

ಯುಗಾದಿ ಹಬ್ಬ; ವಸ್ತುಗಳ ಖರೀದಿ ಭರಾಟೆ ಜೋರು

02:43 PM Apr 02, 2022 | Team Udayavani |

ಗುರುಮಠಕಲ್‌: ಕೊರೊನಾ ಸೋಂಕಿನ ಹಾವಳಿಯಿಂದ ಹೊರಬಂದ ಜನ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಜ್ಜಾಗಿದ್ದಾರೆ. ಮನೆ ಮಂದಿಯಲ್ಲ ಮಾರುಕಟ್ಟೆಗೆ ಬಂದು ಹಣ್ಣು ಸೇರಿದಂತೆ ವಿವಿಧ ಪೂಜಾ ಸಾಮಗ್ರಿ ಖರೀದಿಯಲ್ಲಿ ತೊಡಗಿದ್ದಾರೆ. ಹಬ್ಬದ ನಿಮಿತ್ತ ಬಸ್‌ ನಿಲ್ದಾಣದ ಹತ್ತಿರ ಜನಸಂದಣಿ ಹೆಚ್ಚಾಗಿ ಕಂಡು ಬಂತು.

Advertisement

ಅಂಬಿಗರ ಚೌಡಯ್ಯ ವೃತ್ತದಿಂದ ಗಂಗಾ ಪರಮೇಶ್ವರಿ ವೃತ್ತದವರೆಗೂ ವಾಹನ ದಟ್ಟಣೆ ಹೆಚ್ಚಾಗಿತ್ತು. ಈ ರಸ್ತೆ ಮಾರ್ಗದುದ್ದಕ್ಕೂ ವಾಹನ ಸವಾರರಿಗೆ ಟ್ರಾಫಿಕ್‌ ಕಿರಿಕಿರಿ ಉಂಟಾಯಿತು. ಪಟ್ಟಣದಲ್ಲಿ ಬಹುತೇಕ ಬಟ್ಟೆ ಅಂಗಡಿಗಳು ಜನರಿಂದ ತುಂಬಿದ್ದವು.

ರಂಗೋಲಿ, ಬಣ್ಣದ ಪುಡಿ ಮಾರಾಟ ಜೋರಾಗಿತ್ತು. ಪಟ್ಟಣದ ಪ್ರಮುಖ ರಸ್ತೆಗಳಷ್ಟೇ ಅಲ್ಲದೆ, ಪಾದಚಾರಿ ಮಾರ್ಗಗಳಲ್ಲಿಯೂ ಜನರ ದಟ್ಟಣೆ ಹೆಚ್ಚಾಗಿತ್ತು. ಯುಗಾದಿ ಹಬ್ಬಕ್ಕೆ ಬಟ್ಟೆ, ಮಾವಿನ ತೋರಣ, ಬೇವಿನ ಸೊಪ್ಪು, ಉಡುದಾರ, ಬಳೆ ಸೇರಿ ಮಹಿಳೆಯರ ಅಲಂಕಾರಿಕ ವಸ್ತುಗಳ ಖರೀದಿ ಜೋರಾಗಿತ್ತು.

ಸುಡು ಬಿಸಿಲಲ್ಲೂ ಜನರು ಖರೀದಿಯಲ್ಲಿ ತೊಡಗಿದ್ದರು. ಯುಗಾದಿ ಹಬ್ಬದ ಕಾರಣಕ್ಕೆ ಪೂಜಾ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಸಂತೆ ಹೊಂಡದ ಮುಂಭಾಗದಲ್ಲಿ ಹಬ್ಬಕ್ಕಾಗಿ ಹಣ್ಣು, ಪೂಜಾ ಸಾಮಗ್ರಿ ಹಾಗೂ ಹೂವು ಖರೀದಿಗೂ ಜನ ಮುಗಿ ಬಿದ್ದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next