Advertisement

7.85 crore ಮೌಲ್ಯದ ಕೊಕೇನ್ ಕ್ಯಾಪ್ಸೂಲ್‌ಗಳೊಂದಿಗೆ ವಿದೇಶಿ ಪ್ರಜೆಯ ಬಂಧನ

10:40 PM Aug 11, 2023 | Team Udayavani |

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 7.85 ಕೋಟಿ ರೂ. ಮೌಲ್ಯದ 65 ಕೊಕೇನ್ ಕ್ಯಾಪ್ಸುಲ್‌ಗಳನ್ನು ಹೊಂದಿದ್ದ ಉಗಾಂಡಾದ ವ್ಯಕ್ತಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಶುಕ್ರವಾರ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಸುಳಿವಿನ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆಗಸ್ಟ್ 7 ರಂದು ವಿಮಾನ ನಿಲ್ದಾಣದಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಶಂಕಿತ ಉಗಾಂಡಾದ ಪ್ರಯಾಣಿಕರನ್ನು ತಡೆದರು ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಚಾರಣೆ ನಡೆಸಿದಾಗ, ಪ್ರಯಾಣಿಕರು ಕೊಕೇನ್ ಹೊಂದಿರುವ ಕ್ಯಾಪ್ಸುಲ್‌ಗಳನ್ನು ಕಳ್ಳಸಾಗಣೆ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾನೆ ಎಂದು ಬಂಧಿತನನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ, ನ್ಯಾಯಾಲಯದ ಆದೇಶದ ಮೇರೆಗೆ ಸರ್ಕಾರಿ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next