ನವದೆಹಲಿ : ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಮೇ 2 ರಂದು ನಡೆಯಬೇಕಿದ್ದ ಯುಜಿಸಿ-ನೆಟ್ 2021 ಅರ್ಹತಾ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಕ್ ಟ್ವೀಟ್ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ದೇಶದಲ್ಲಿ ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿದೆ. ಇದೇ ಕಾರಣಕ್ಕೆ ಮೇ 2 ರಿಂದ ಮೇ 17ರವರೆಗೆ ನಡೆಯಬೇಕಿದ್ದ ನೆಟ್ ಅರ್ಹತಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ಈಗಾಗಲಾ ಪರೀಕ್ಷೆಗೆಂದು ತಯಾರಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಮುಂಬರುವ 15 ದಿನಗಳಲ್ಲಿ ಮುಂದಿನ ಪರೀಕ್ಷೆ ದಿನಾಂಕವನ್ನು ತಿಳಿಸಲಾಗುವುದು ಎಂದು ರಮೇಶ್ ಪೋಖ್ರಿಯಾಲ್ ತಮ್ಮ ಟ್ವಿಟ್ಟರ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.