Advertisement

ಪ್ರಧಾನಿ ವಿರುದ್ಧ ಕ್ರಮಕ್ಕೆ ಉಗ್ರಪ್ಪ ಆಗ್ರಹ

03:01 PM Dec 02, 2017 | |

ಬೆಂಗಳೂರು: ಗುಜರಾತ್‌ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಸೋಮನಾಥ ದೇವಾಯಲದ ಹೆಸರು ಪ್ರಸ್ತಾಪಿಸಿ ದೇವರು-ಧರ್ಮದ ವಿಚಾರಗಳನ್ನು ಮುನ್ನೆಲೆಗೆ ತಂದು ಚುನಾವಣಾ ನೀತಿ ಸಂಹಿತೆ, ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂ ಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ವಿ.ಎಸ್‌. ಉಗ್ರಪ್ಪ ಆಗ್ರಹಿಸಿದ್ದಾರೆ.

Advertisement

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮನಾಥ ದೇವಾಲಯದ ವಿಷಯ ಪ್ರಸ್ತಾಪಿಸಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ಭಾವನೆಗಳ ಮೇಲೆ ಪ್ರಭಾವ ಬೀರುವಂತಹ ಕೆಲಸ ಪ್ರಧಾನಿ ಮಾಡಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಆಗಿದೆ.

ದೇಶದ ಪ್ರಧಾನಿಯವರೇ ಈ ರೀತಿ ನಡೆದುಕೊಂಡಿರುವುದು ಸರಿಯಲ್ಲ. ಹಾಗಾಗಿ, ನಿಷ್ಪಕ್ಷಪಾತ ಹಾಗೂ ನ್ಯಾಯ ಸಮ್ಮತ ಚುನಾವಣೆಯನ್ನು ಖಾತರಿಗೊಳಿಸಲು ಚುನಾವಣಾ ಆಯೋಗ ಕೂಡಲೇ ಪ್ರಧಾನಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು. ಅದೇ ರೀತಿ ಗುಜರಾತಿನ ಮುಖ್ಯಮಂತ್ರಿ ವಿಜಯ್‌ ರೂಪಾನಿ ಸಹ ಸಂದರ್ಶನವೊಂದರಲ್ಲಿ ದಲಿತರನ್ನು ಓಲೈಸುವ ನೇರ ಹೇಳಿಕೆಗಳನ್ನು ನೀಡಿದ್ದಾರೆ.

ಇದು ಸಹ ಕಾನೂನುಬಾಹಿರವಾಗಿದ್ದು, ಅವರ ವಿರುದ್ಧವೂ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗಬೇಕು. ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಉಳಿಯಬೇಕಾದರೆ ಪ್ರಧಾನಿ ಹಾಗೂ ಗುಜರಾತಿನ ಮುಖ್ಯಮಂತ್ರಿ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಉಗ್ರಪ್ಪ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next