Advertisement
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ಯಡಿಯೂರಪ್ಪ ತರಾತುರಿಯಲ್ಲಿ ರಾಯಚೂರಿನಲ್ಲಿ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗಬೇಕು ಎಂದು ಸಿದ್ಧರಾದರೆ ಅಮಿತ್ ಶಾ ಭೇಟಿಗೆ ಅವಕಾಶವನ್ನೇ ನೀಡಲಿಲ್ಲ. ಬೆಕ್ಕು ಬಂದಾಗ ಇಲಿ ಯಾವ ರೀತಿ ಬಿಲ ಹುಡುಕುತ್ತದೆಯೋ ಅದೇ ರೀತಿ ಅಮಿತ್ ಶಾ ಕಂಡರೆ ಯಡಿಯೂರಪ್ಪ ಬಿಲ ಹುಡುಕುತ್ತಿದ್ದಾರೆ. ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿದವರನ್ನು 24 ಗಂಟೆಯೊಳಗೆ ಮಂತ್ರಿ ಮಾಡುತ್ತೇವೆ ಎಂದಿದ್ದರು. ಯಡಿಯೂರಪ್ಪ ಮಾತು ನಂಬಿ ಅವರೆಲ್ಲ ಸೂಟುಬೂಟು ಹೊಲಿಸಿಕೊಂಡು ಮಂತ್ರಿಮಂಡಲ ಸೇರಲು ಕಾಯುತ್ತಿದ್ದಾರೆ. ಶಾಸಕರಿಗೆ ನೀಡಿದ ಭರವಸೆಯನ್ನಾಗಲೀ ರಾಜ್ಯದ ಜನರ ಅಭಿವೃದ್ಧಿಯ ಭರವಸೆಯನ್ನಾಗಲೀ ಈಡೇರಿಸಲು ಸಾಧ್ಯವಾಗಲಿಲ್ಲ. ಇನ್ನು 24 ಗಂಟೆಯೊಳಗೆ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಿಸದಿದ್ದರೆ ರಾಜ್ಯದ ಜನರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
Related Articles
Advertisement
ಕಪಾಲಬೆಟ್ಟದಲ್ಲಿ ಡಿ.ಕೆ.ಶಿವಕುಮಾರ್ ನಿರ್ಮಿಸಲು ಉದ್ದೇಶಿಸಿರುವ ಏಸು ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ವಿರೋಧ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಉಗ್ರಪ್ಪ, ಶಿವಕುಮಾರ್ ಪಕ್ಷದ ಹಿರಿಯ ನಾಯಕರು. ಪಕ್ಷ ಸಂಕಷ್ಟದಲ್ಲಿದ್ದಾಗ ಬಲ ತುಂಬಿದವರು. ಏಸುಪ್ರತಿಮೆ ವಿಚಾರವಾಗಿ ಡಿ.ಕೆ.ಶಿವಕುಮಾರ್ ಒಂಟಿಯಲ್ಲ. ಅವರಿಗೆ ಕಾಂಗ್ರೆಸ್ ಪಕ್ಷದ ಬೆಂಬಲ ಇದೆ. ಕಲ್ಲಡ್ಕ ಪ್ರಭಾಕರ ಭಟ್‌ಗೆ ತಮ್ಮ ಶಾಲೆಯ ಮಕ್ಕಳ ಬಗ್ಗೆ ಮಾತ್ರ ಗೊತ್ತು. ರಾಜ್ಯದ ಎಲ್ಲಾ ಮಕ್ಕಳ ಬಗ್ಗೆ ಅವರು ಕಾಳಜಿ ತೋರಲಿ. ಕನಕಪುರ, ರಾಮನಗರವೂ ಸೇರಿದಂತೆ ದೇಶದ ಜನ ಸಾಮರಸ್ಯದಿಂದ ಬದುಕುತ್ತಿದ್ದು, ಸಾಮರಸ್ಯ ಕೆಡಸುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಜನತೆಯ ಬಗ್ಗೆ ನಿಜಕ್ಕೂ ಕಾಳಜಿ ಇದ್ದರೆ, ಆರ್ಥಿಕ ಕುಸಿತ, ಬೆಲೆ ಏರಿಕೆ ಸರಿಪಡಿಸಿ ಜನರ ಸಮಸ್ಯೆಗಳ ಕಡೆ ಗಮನ ಕೊಡಲಿ ಎಂದರು.