Advertisement
ಉದ್ಘಾಟನಾ ಕಾರ್ಯಕ್ರಮ ಮುಗಿದ ನಂತರ ಮಧ್ಯಾಹ್ನ 3 ಗಂಟೆಗೆ ಸಾರ್ವಜನಿಕ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಆರಂಭವಾಯಿತು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾತ್ರಿ 10:30ರ ಗಂಟೆ ವರೆಗೆ ಜನರ ಸಮಸ್ಯೆಗಳನ್ನು ಆಲಿಸಿದರು. ಜಿಲ್ಲೆ ಹಾಗೂ ತಾಲೂಕು ಪ್ರದೇಶಗಳಿಂದ ಆಗಮಿಸಿ ಸುಮಾರ 4000 ಸಾವಿರ ಅರ್ಜಿಗಳಲ್ಲಿ ಕೆಲವನ್ನು ಸ್ಥಳದಲ್ಲಿಯೇ ಬಗೆಹರಿಸಿದರು. ಮತ್ತೆ ಕೆಲವಗಳಿಗೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆಸಿ ಇಷ್ಟು ದಿನಗಳ ಒಳಗೆ ಸಾರ್ವಜನಿಕರ ಸಮಸ್ಯೆ ಬಗೆಹರಿಸಬೇಕು ಎಂದು ಆದೇಶ ಮಾಡಿದರು.
Related Articles
Advertisement
ಗ್ರಾಮ ವಾಸ್ತವ್ಯ ಹಾಗೂ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾರ್ವಜನಿಕರಿಗೆ ಪ್ರತ್ಯೆಕವಾದ ಪೆಂಡಾಲ್ನಲ್ಲಿ ಹುಗ್ಗಿ ಹಾಗೂ ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಬರುವ ಅಂಗವಿಕಲರಿಗೆ ಯಾವುದೇ ಸಮಸ್ಯೆ ಆಗದಂತೆ ವ್ಹೀಲ್ ಚೇರ್ ಹಾಗೂ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ ಅಂಗವಿಕಲರು ಮತ್ತು ವೃದ್ಧರಿಗೆ ಯಾವುದೇ ತೊಂದರೆಯಾಗಲಿಲ್ಲ.
ಮರಾಠ ಸಮಾಜದಿಂದ ಮನವಿ: ಗಡಿ ಭಾಗದಲ್ಲಿ ಮರಾಠ ಸಮಾಜವರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಮರಾಠ ಸಮಾಜವನ್ನು 3ಬಿಯಿಂದ 2ಎ ಸೇರ್ಪಡೆ ಮಾಡಬೇಕು ಎಂದು ಮಾಜಿ ಶಾಸಕ ಮಾರುತಿರಾವ್ ಮೂಳೆ ನೇತೃತ್ವದಲ್ಲಿ ಸಾಕಷ್ಟು ಬಾರಿ ಹೋರಾಟ ಮಾಡಿದರೂ ಪ್ರಯೋಜವಾಗಿಲ್ಲ. ಅ ಕೆಲಸ ಮಾಡಬೇಕು. ಮತ್ತು ಮರಾಠ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು ಎಂದು ಮರಾಠ ಸಮಾಜದಿಂದ ಮನವಿ ಮಾಡಲಾಯಿತು.
ಗ್ರಾಮಸ್ಥರಿಗೆ ಸಂತೋಷ: ಗ್ರಾಮದ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 32 ಕೋಟಿ ರೂ. ಅನುದಾನ ನೀಡಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬೇಡಿಕೆಗಳನ್ನು ಒಂದೇ ಸಲ ಈಡೇರಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.