Advertisement
ಬಿಜೆಪಿ ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ ಅವರು ಪ್ರಸ್ತುತ ಗುಜರಾತ್‌ನ ಮೊರ್ಬಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ, ಕಳೆದ ಅಕ್ಟೋಬರ್‌ನಲ್ಲಿ 140 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಮೋರ್ಬಿ ತೂಗು ಸೇತುವೆ ದುರಂತ ಸಂದರ್ಭ ತನ್ನ ಜೀವದ ಹಂಗನ್ನು ತೊರೆದು ನೀರಿಗೆ ಬಿದ್ದ ಜನರ ರಕ್ಷಣೆಗೆ ನದಿಗೆ ಹಾರಿದ್ದ ಕಾಂತಿಲಾಲ್ ಅಮೃತಿಯಾ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿತ್ತು ಅದರಂತೆ ಫಲಿತಾಂಶದಲ್ಲಿ ಭಾರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಜಯಂತಿ ಪಟೇಲ್ ಅವರನ್ನು ಕಣಕ್ಕಿಳಿಸಿದೆ. ಮತ್ತೊಂದೆಡೆ ಎಎಪಿ ಪಂಕಜ್ ರಂಸಾರಿಯಾ ಅವರನ್ನು ಕಣಕ್ಕಿಳಿಸಿದೆ.
ತೀವ್ರ ಪೈಪೋಟಿಯಲ್ಲಿದ್ದ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದ್ದು 68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆಯುವ ಹಂತದಲ್ಲಿದೆ.