ಬೆಳ್ತಂಗಡಿ: ಉಜಿರೆ ನಿವಾಸಿ ಎಂಟು ವರ್ಷದ ಮಗುವಿನ ಅಪಹರಣ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆ ಚುರುಕುಗೊಂಡಿದೆ. ಮಗುವನ್ನು ಅಪಹರಿಸಿ ಬಿಡುಗಡೆಗಾಗಿ 17 ಕೋಟಿ ರೂ. ಬೇಡಿಕೆ ಇಟ್ಟಿದ್ದ ದುಷ್ಕರ್ಮಿಗಳು ಇದೀಗ ಹತ್ತು ಕೋಟಿ ರೂ. ನೀಡುವಂತೆ ಬೇಡಿಕೆಯಿರಿಸಿದ್ದಾರೆ ಎಂದು ತಿಳಿದುಬಂದಿದೆ.
ಉಜಿರೆ ಉದ್ಯಮಿ ರಥಬೀದಿ ನಿವಾಸಿ ಎ.ಕೆ.ಶಿವನ್ ಎಂಬುವರ ಮೊಮ್ಮಗ ಅನುಭವ್ (8) ವರ್ಷದ ಮಗುವನ್ನು ಗುರುವಾರ ಸಂಜೆ ಅಪಹರಣ ಮಾಡಲಾಗಿತ್ತು. ಮನೆ ಮುಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ಅಪರಿಚಿತರು ಕಾರಿನಲ್ಲಿ ಅಪಹರಣ ಮಾಡಿದ್ದರು.
ಅಪಹರಣದ ಬಳಿಕ ಮಗುವಿನ ತಾಯಿಗೆ ಕರೆ ಮಾಡಿ 100 ಬಿಟ್ ಕಾಯಿನ್ ಅಂದರೆ 17 ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದರು. ಆದರೆ ಇದೀಗ ಮಗುವಿನ ತಂದೆಯ ಜೊತೆ ಸಂಪರ್ಕ ಸಾಧಿಸಿರುವ ಅಹರಣಕಾರರು 60 ಬಿಟ್ ಕಾಯಿನ್ ಅಂದರೆ 10 ಕೋಟಿ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಇದನ್ನೂ ಓದಿ:ಉಜಿರೆ ಮಗು ಅಪಹರಣ ಪ್ರಕರಣ: 17 ಕೋ.ರೂ. ಬೇಡಿಕೆಯಿಟ್ಟ ದುಷ್ಕರ್ಮಿಗಳು, ತೀವ್ರಗೊಂಡ ಶೋಧ
ಕುಟುಂಬದ ವ್ಯವಹಾರಗಳ ತಿಳುವಳಿಕೆ ಇರುವ ವ್ಯಕ್ತಿಗಳೇ ಕೃತ್ಯ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಪೊಲೀಸರು ಮೊಬೈಲ್ ನೆಟ್ ವರ್ಕ್ ಮೂಲಕ ಆರೋಪಿಗಳ ಪತ್ತೆಗೆ ಕ್ರಮಕೈಗೊಂಡಿದ್ದಾರೆ.
ಬಂಟ್ವಾಳ ಡಿವೈಎಸ್ ಪಿ ವೆಲೆಂಟೈನ್ ಡಿಸೋಜ ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ನಂದಕುಮಾರ್, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ