ಬೆಳ್ತಂಗಡಿ: ಗ್ರಾ.ಪಂ. ವ್ಯವಸ್ಥೆಯಲ್ಲಿ ಪೌರ ಪ್ರಜ್ಞೆ ಹಾಗೂ ಜನರ ಸಕ್ರಿಯ ಭಾಗವಹಿಸುವಿಕೆ ಅತೀ ಅಗತ್ಯ. ಈ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಪ್ರಜ್ಞಾವಂತ ಯುವಜನರು ಕ್ರಿಯಾಶೀಲರಾಗಿ ಅಭಿವೃದ್ಧಿ ಕಾರ್ಯ ಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಉಜಿರೆ ಶ್ರೀ ಧ. ಮಂ. ಕಾಲೇಜಿನ ಹಿರಿಯ ವಿದ್ಯಾರ್ಥಿ, ಬಂದಾರು ಗ್ರಾ.ಪಂ. ಅಧ್ಯಕ್ಷ ಉದಯ ಕುಮಾರ್ ಬಿ.ಕೆ. ಹೇಳಿದರು.
ಅವರು ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಆಶ್ರಯದಲ್ಲಿ ಹಿರಿಯ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕದಲ್ಲಿ ಪಂ. ವ್ಯವಸ್ಥೆಯ ರಚನೆಹಾಗೂ ಅಭಿವೃದ್ಧಿ ಕಾರ್ಯಕ್ರಮಗಳು ಎಂಬ ವಿಷಯದ ಬಗ್ಗೆ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಎ. ಜಯ ಕುಮಾರ್ ಶೆಟ್ಟಿ ಮಾತನಾಡಿದರು. ಅರ್ಥಶಾಸ್ತ್ರ ಪ್ರಾಧ್ಯಾಪಕಿ ವಸಂತಿ ಹಾಗೂ ಅರ್ಥಶಾಸ್ತ್ರ ಸಂಘದ ವಿದ್ಯಾರ್ಥಿ ಸಂಯೋಜಕ ಕಿಶೋರ್ ಕುಮಾರ್ ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಪ್ರಾಧ್ಯಾಪಕ ಮಹೇಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಪ್ರಾಧ್ಯಾಪಕ ಡಾ| ಗಣರಾಜ್ ಕೆ. ವಂದಿಸಿದರು.
ಗ್ರಾಮ ಸ್ವರಾಜ್ಯದ ಕನಸು
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ನನಸಾಗಬೇಕಾದರೆ ಪಂ. ವ್ಯವಸ್ಥೆಯ ಬಗ್ಗೆ ಜನ ಸಾಮಾನ್ಯರಲ್ಲಿ ತಿಳಿವಳಿಕೆ ಮೂಡಿ ರಚನಾತ್ಮಕವಾಗಿ ಭಾಗವಹಿಸುವಂತಾಗಬೇಕು.
– ಡಾ| ಎ. ಜಯ ಕುಮಾರ್ ಶೆಟ್ಟಿ