Advertisement
ಎಸ್‌ಡಿಎಂ ಕಾಲೇಜಿನ ಸಮ್ಯಕ್‌ದರ್ಶನ ಸಭಾಂಗಣದಲ್ಲಿ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಮಂಗಳವಾರ ಕಥೆ-ಅನುಭವ-ಕಲ್ಪನೆ ನಿವೇದನೆಯ ‘ಸ್ಪೀಕ್ಸ್ – 3’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
Related Articles
Advertisement
ಹೊಸ ತಲೆಮಾರಿನ ಹೊಸ ಕತೆಗಾರರ ಸಂವೇದನೆಯನ್ನು ಮತ್ತಷ್ಟು ನಿಖರವಾಗಿಸುವ ದೃಷ್ಟಿಯಿಂದ ಸ್ಪೀಕ್ಸ್‌ನಂತಹ ವೇದಿಕೆಗಳು ಮುಖ್ಯವೆನ್ನಿಸುತ್ತವೆ. ಮಾತುಕತೆ, ವಿವಿಧ ಅನುಭವಗಳ ನಿವೇದನೆ ಮತ್ತು ಸರಿತಪ್ಪುಗಳ ಪರಾಮರ್ಶೆಯ ನೆಲೆಯಲ್ಲಿ ಚರ್ಚೆಗಳು ನಡೆದರೆ ಮಹತ್ವದ ಕಥೆಗಾರರನ್ನು ರೂಪಿಸಬಹುದು ಎಂದು ಹೇಳಿದರು.
ಸ್ಪೀಕ್ಸ್ ಪರಿಕಲ್ಪನೆಯ ರೂವಾರಿ, ಸಹಾಯಕ ಪ್ರಾಧ್ಯಾಪಕಿ ಡಾ| ಗೀತಾ ಎ.ಜೆ ಅವರು ಕಥನ ಕಟ್ಟುವ ಸೃಜನಶೀಲತೆಯುಳ್ಳ ಪ್ರತಿಭೆಗಳಿಗಾಗಿ ಸ್ಪೀಕ್ಸ್ ವೇದಿಕೆ ರೂಪಗೊಂಡಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅವರು ಹೊಸ ಕಥೆಗಾರರ ಸೃಜನಶೀಲ ಅಭಿವ್ಯಕ್ತಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಪ್ರತಿಯೊಬ್ಬ ವ್ಯಕ್ತಿಯೊಳಗೂ ಕತೆಗಳು ಇರುತ್ತವೆ. ಸ್ಪೀಕ್ಸ್‌ನಂತಹ ಕಾರ್ಯಕ್ರಮಗಳು ಹೊಸ ಹೊಸ ಕತೆಗಾರರಿಗೆ ವೇದಿಕೆಯಾಗಿದ್ದು, ಪ್ರತಿಭೆಗಳನ್ನು ಗುರುತಿಸಲು ಸಹಾಯ ಮಾಡುತ್ತವೆ ಎಂದರು.
ಕತೆಗಾರ, ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ರಾಜಶೇಖರ ಹಳೆಮನೆ ಅವರು ಈ ಸಂದರ್ಭದಲ್ಲಿ ಮಾತನಾಡಿದರು.
ಸ್ಪೀಕ್ಸ್‌ನ ಮೂರನೇ ಸಂಚಿಕೆಯಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿರಾಟ್ ಪದ್ಮನಾಭ, ವಿದ್ಯಾರ್ಥಿಗಳಾದ ಸಂಜಯ್ ಚಿತ್ರದುರ್ಗ, ಸೃಷ್ಟಿ ಚಂಡಕಿ, ದರ್ಶಿನಿ ತಿಪ್ಪಾರೆಡ್ಡಿ, ಸಿಂಚನ ಕಲ್ಲೂರಾಯ ಅವರು ಕತೆಗಳನ್ನು ಪ್ರಸ್ತುತಪಡಿಸಿದರು.
ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ್ ಹೆಗಡೆ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ದಿವ್ಯ ಶ್ರೀ ಹೆಗಡೆ ಅವರು ಕಾರ್ಯಕ್ರಮ ನಿರೂಪಿಸಿದರು.