ಬ್ರಿಟನ್: ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ನಡುವೆಯೇ ಬ್ರಿಟನ್ ನಲ್ಲಿ ಕಳೆದ 24ಗಂಟೆಗಳಲ್ಲಿ 88,376 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ ಎಂದು ಶುಕ್ರವಾರ(ಡಿಸೆಂಬರ್ 17) ವರದಿ ತಿಳಿಸಿದೆ.
ಇದನ್ನೂ ಓದಿ:ರಮೇಶ್ ಕುಮಾರ್ ಹೇಳಿಕೆ ಕಾಂಗ್ರೆಸ್ ಸಂಸ್ಕೃತಿಯ ಅನಾವರಣ: ಗೀತಾ ವಿವೇಕಾನಂದ
ಮುಂದಿನ ಕೆಲವು ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಲಿದೆ ಎಂದು ಬ್ರಿಟನ್ ನ ಹಿರಿಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಬುಧವಾರ ಬ್ರಿಟನ್ ನಲ್ಲಿ 78,610 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿತ್ತು, ಕಳೆದ ವರ್ಷ ಜನವರಿ 08ರಂದು 68,053 ಪ್ರಕರಣ ವರದಿಯಾಗಿತ್ತು.
ರಾಜಧಾನಿ ಲಂಡನ್ ನಲ್ಲಿಯೂ ಒಂದೇ ದಿನದಲ್ಲಿ 19,294 ಮಂದಿಗೆ ಪಾಸಿಟಿವ್ ವರದಿ ಬಂದಿದೆ. 1,691 ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು 11,708 ಒಮಿಕ್ರಾನ್ ಪ್ರಕರಣಗಳು ವರದಿಯಾಗಿದೆ ಎಂದು ಹೇಳಿದೆ.
ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 146 ಮಂದಿ ಸಾವನ್ನಪ್ಪಿದ್ದಾರೆ. ಒಮಿಕ್ರಾನ್ ಕ್ಷಿಪ್ರವಾಗಿ ಹರಡುತ್ತಿರುವ ಪರಿಣಾಮ ದಿನಂಪ್ರತಿ ಕೋವಿಡ್ ನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಹೆಚ್ಚಳವಾಗಿದೆ. ಬ್ರಿಟನ್ ನಲ್ಲಿ ಒಂದೇ ದಿನದಲ್ಲಿ 4,500 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇಂಗ್ಲೆಂಡ್ ನ ಮುಖ್ಯ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.