Advertisement
ಉಕ್ರೇನ್ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿ ಇರಿಸಿದೆ ಎಂದು ರಷ್ಯಾ ಬುಧವಾರ ಹೇಳಿಕೊಂಡಿದೆ. ಖಾರ್ಕಿವ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ರಷ್ಯಾ ಪ್ರಯತ್ನಿಸುತ್ತಿರುವಾಗ ಉಕ್ರೇನ್ ಪಡೆಗಳು ಭಾರತೀಯರನ್ನು ಒತ್ತೆಯಾಳಾಗಿ ಇರಿಸಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
Related Articles
Advertisement
ಈತನ್ಮಧ್ಯೆ ಭಾರತ, ಪಾಕಿಸ್ತಾನ, ಚೀನಾ ಮತ್ತು ಇತರ ದೇಶಗಳ ವಿದ್ಯಾರ್ಥಿಗಳು “ರಷ್ಯಾದ ಸಶಸ್ತ್ರ ಆಕ್ರಮಣದ ಒತ್ತೆಯಾಳುಗಳಾಗಿದ್ದಾರೆ” ಎಂದು ಉಕ್ರೇನ್ ಆರೋಪಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಕರೆ ಮಾಡಿದ ಗಂಟೆಗಳ ನಂತರ ರಷ್ಯಾ ಸಚಿವಾಲಯದ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಸಂಘರ್ಷದ ಪ್ರದೇಶಗಳಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಬಗ್ಗೆ ಅವರು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
“ಉಕ್ರೇನ್‌ನಲ್ಲಿನ ಪರಿಸ್ಥಿತಿಯನ್ನು ಇಬ್ಬರು ನಾಯಕರು ಪರಿಶೀಲಿಸಿದರು. ಅವರು ಸಂಘರ್ಷದ ಪ್ರದೇಶಗಳಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಬಗ್ಗೆ ಚರ್ಚಿಸಿದರು” ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.