Advertisement

ಈಶಾನ್ಯ ಉಕ್ರೇನ್: ರಕ್ಷಣಾ ವಿಮಾನ ದುರಂತದಲ್ಲಿ 22 ಜನರ ಸಾವು

12:00 PM Sep 26, 2020 | keerthan |

ಉಕ್ರೇನ್: ಮಿಲಿಟರಿ ಸಾರಿಗೆ ವಿಮಾನ ದುರಂತದಲ್ಲಿ 22 ಜನರು ಸಾವನ್ನಪ್ಪಿದ ಘಟನೆ ಈಶಾನ್ಯ ಉಕ್ರೇನ್ ನಲ್ಲಿ ಶುಕ್ರವಾರ ಸಜೆ ನಡೆದಿದೆ.

Advertisement

ವಾಯು ಪಡೆಯ ಪೈಲಟ್ ಗಳು, ತರಬೇತಿ ಸೈನಿಕರು ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಇದುವರೆಗೆ 22 ಮಂದಿ ಸಾವನ್ನಪ್ಪಿದ್ದು, ಕನಿಷ್ಠ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿಗಳು ತಿಳಿಸಿದೆ.

ಉಕ್ರೇನ್‌ನ ತುರ್ತು ಸೇವೆ ವಿಭಾಗ ಈ ಬಗ್ಗೆ ಮಾಹಿತಿ ನೀಡಿದ್ದು, ಮಿಲಿಟರಿ ವಿಮಾನ ನಿಲ್ದಾಣದಿಂದ ಕೇವಲ ಎರಡು ಕಿ.ಮೀ ದೂರದಲ್ಲಿ ದುರಂತ ನಡೆದಿದೆ. 22 ಜನರ ದೇಹವನ್ನು ಹೊರತೆಗೆಯಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಇನ್ನೂ ನಾಲ್ವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದಿದೆ.

ಇದನ್ನೂ ಓದಿ:ಡ್ರಗ್ಸ್‌ ಚಾಟ್‌ ಗ್ರೂಪ್‌ಗೆ ದೀಪಿಕಾ ಅಡ್ಮಿನ್‌!

ಈ ವಿಮಾನ ತರಬೇತಿ ವಿಮಾನವಾಗಿತ್ತು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮೈರ್ ಜೆಲೆನ್ಸ್ಕಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next