ನವದೆಹಲಿ: ಉಕ್ರೇನ್‌ನಲ್ಲಿ ವೈದ್ಯಕೀಯ ವಿದ್ಯಾಭ್ಯಾಸ ಪಡೆಯುತ್ತಿದ್ದು, ಉಕ್ರೇನ್-ರಷ್ಯಾ ಯುದ್ಧದ ಹಿನ್ನೆಲೆ ಭಾರತಕ್ಕೆ ವಾಪಸಾಗಿರುವ ವಿದ್ಯಾರ್ಥಿಗಳು ಶುಕ್ರವಾರ ನವದೆಹಲಿಯ ರಾಷ್ಟ್ರೀಯ ವೈದ್ಯಕೀಯ ಆಯೋಗದ ಎದುರು ಪ್ರತಿಭಟನೆ ನಡೆಸಿದ್ದಾರೆ.
ಭಾರತದಲ್ಲಿ ವೈದ್ಯಕೀಯ ಶಿಕ್ಷಣ ಮುಂದುವರಿಸುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.
ದೆಹಲಿ, ಉತ್ತರ ಪ್ರದೇಶ, ಹರ್ಯಾಣ, ಹಿಮಾಚಲ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಧ್ಯಪ್ರದೇಶ ಮತ್ತು ರಾಜಸ್ಥಾನ ಮೂಲದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ:ನೌಕಾಪಡೆಯ ಯುದ್ಧ ಹಡಗಿನಿಂದ ವಿಎಲ್-ಎಸ್‌ಎಸ್‌ಎಎಂ ಹೊಸ ಕ್ಷಿಪಣಿ ಉಡಾವಣೆ
Related Articles
“ನಾವೆಲ್ಲರೂ ಮುಂದೆ ವೈದ್ಯರಾಗುವವರಾದ್ದರಿಂದ ಆನ್‌ಲೈನ್ ಶಿಕ್ಷಣದಲ್ಲಿ ಎಲ್ಲವನ್ನೂ ಕಲಿಯಲು ಸಾಧ್ಯವಿಲ್ಲ. ಭಾರತದ ವೈದ್ಯಕೀಯ ಕಾಲೇಜುಗಳಲ್ಲಿ ನಮಗೆ ಅವಕಾಶ ಸಿಗಬೇಕು’ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.