Advertisement

ಭಾರತಕ್ಕೆ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ ಪರೀಕ್ಷೆಗೆ 2 ಅವಕಾಶ

10:13 PM Mar 28, 2023 | Team Udayavani |

ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ಹಾಗೂ ಕೊರೊನಾ ಬಿಕ್ಕಟ್ಟಿನಿಂದಾಗಿ ಚೀನಾ ಮತ್ತು ಫಿಲಿಪ್ಪೀನ್ಸ್‌ನಿಂದ ಭಾರತಕ್ಕೆ ಹಿಂದಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ ಪರೀಕ್ಷೆ ಪೂರ್ಣಗೊಳಿಸಲು ಕಡೆಯ 2 ಅವಕಾಶ ನೀಡಿ ಸುಪ್ರೀಂಕೋರ್ಟ್‌ ಆದೇಶಿಸಿದೆ.

Advertisement

ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ ಪಾರ್ಟ್‌1 ಹಾಗೂ ಎಂಬಿಬಿಎಸ್‌ ಪಾರ್ಟ್‌2 ಪರೀಕ್ಷೆಗಳನ್ನು ಪೂರ್ಣಗೊಳಿಸಲು ಅಂತಿಮವಾಗಿ 1 ಅವಕಾಶ ನೀಡಬೇಕೆಂದು ತಜ್ಞರ ಸಮಿತಿ ನೀಡಿದ ಶಿಫಾರಸನ್ನು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಪ್ರಸ್ತುತಪಡಿಸಿತು.

ಆದರೆ, ನ್ಯಾ. ಬಿ.ಆರ್‌.ಗವಾಯಿ ಮತ್ತು ವಿಕ್ರಂ ನಾಥ್‌ ಅವರ ನ್ಯಾಯಪೀಠವು ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶಿಫಾರಸು ಮಾರ್ಪಾಡು ಮಾಡಿ, 2 ಬಾರಿ ಅವಕಾಶ ನೀಡಲು ಆದೇಶಿಸಿದೆ. ಇದೇ ವೇಳೆ ಪರೀಕ್ಷೆಗೆ ಅನುವು ಮಾಡಿಕೊಡುವಂತೆ ಸಲ್ಲಿಸಲಾಗಿದ್ದ ಎಲ್ಲ ವೈದ್ಯಕೀಯ ವಿದ್ಯಾರ್ಥಿಗಳ ಅರ್ಜಿಯನ್ನು ಪೀಠ ಇತ್ಯರ್ಥಪಡಿಸಿದೆ.

ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಭಾರತದ ಯಾವುದೇ ವೈದ್ಯಕೀಯ ಕಾಲೇಜುಗಳಲ್ಲಿ ನೋಂದಾಯಿಸಿಕೊಳ್ಳದೆಯೂ, ಅಸ್ತಿತ್ವದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ಪಠ್ಯಕ್ರಮ ಮತ್ತು ಮಾರ್ಗಸೂಚಿಗಳಿಗೆ ಅನುಗುಣವಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಸಮಿತಿಯ ಸಲಹೆಯಂತೆ ವಿದ್ಯಾರ್ಥಿಗಳಿಗೆ ಥಿಯರಿ ಪರೀಕ್ಷೆಯನ್ನು ಭಾರತದ ವೈದ್ಯಕೀಯ ಪರೀಕ್ಷೆಗೆ ಅನುಸಾರವಾಗಿ ಹಾಗೂ ಪ್ರಾಯೋಗಿಕ ಪರೀಕ್ಷೆಗಳನ್ನು ನಿಯೋಜಿತ ಸರ್ಕಾರಿ ಕಾಲೇಜುಗಳಲ್ಲಿ ನಡೆಸಲಾಗುತ್ತದೆ. ಎರಡೂ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಬಳಿಕವೂ ವಿದ್ಯಾರ್ಥಿಗಳು ಎರಡು ವರ್ಷ ಇಂಟರ್ನ್ಶಿಪ್‌ ಮಾಡಬೇಕಿದ್ದು, ಒಂದು ವರ್ಷ ಉಚಿತ, ಮತ್ತೂಂದು ವರ್ಷ ರಾಷ್ಟ್ರೀಯ ವೈದ್ಯಕೀಯ ಆಯೋಗ ನಿಗದಿಪಡಿಸಿದ ಮೊತ್ತ ಪಾವತಿಸಿ ಪೂರ್ಣಗೊಳಿಸಬೇಕಿರುತ್ತದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next