Advertisement
ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿ ಬೇಕರಿ ಹೊಂದಿದ್ದ ರಾಜೇಶ್, ಹೆದ್ದಾರಿ ಇನ್ನೊಂದು ಬದಿಯಲ್ಲಿದ್ದ ಮನೆಯಿಂದ ಬೇಕರಿಗೆ ಆಗಮಿಸಲು ಹೆದ್ದಾರಿ ದಾಟಲು ಯತ್ನಿಸಿದಾಗ ವಿರುದ್ಧ ದಿಕ್ಕಿನಲ್ಲಿ ಅತೀ ವೇಗದಲ್ಲಿ ಆಗಮಿಸಿದ್ದ ಬೈಕ್ ಢಿಕ್ಕಿ ಹೊಡೆದಿದ್ದು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತಲಪಾಡಿ ವೀರಾಂಜನೇಯ ವ್ಯಾಯಾಮ ಶಾಲೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಘಟನೆಗೆ ಕಾರಣನಾದ ಬೈಕ್ ಸವಾರ ಮಹಮ್ಮದ್ ಸೊಹೈಲ್‌ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.