Advertisement

ಉಳ್ಳಾಲ:ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಂಪತಿ

09:26 AM Jun 21, 2019 | Team Udayavani |

ಉಳ್ಳಾಲ: ತೊಕ್ಕೊಟ್ಟುವಿನ ಚೆಂಬುಗುಡ್ಡೆ ಬಳಿ ದಂಪತಿಗಳಿಬ್ಬರು ಸುಟ್ಟ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆಯಾಗಿದ್ದಾರೆ. ಇಬ್ಬರೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

Advertisement

ಪದ್ಮನಾಭ (72) ಮತ್ತು  ವಿಮಲಾ(60) ಆತ್ಮಹತ್ಯೆ ಮಾಡಿಕೊಂಡಿದ್ದು ಇಬ್ಬರು ಮನೆಯೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಇಬ್ಬರೂ ಅನಾರೋಗ್ಯದಿಂದ ಬಳಲುತ್ತಿದ್ದು ಇದೇ ಕಾರಣಕ್ಕಾಗಿ ಆತ್ಮಹತ್ಯೆಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Advertisement

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next