Advertisement

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

12:53 AM Oct 11, 2024 | Team Udayavani |

ಉಳ್ಳಾಲ: ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ತಲಪಾಡಿಯ ಬಾರ್‌ವೊಂದರ ಬಳಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿ ತಲಪಾಡಿ ನಾರ್ಲ ಪಡೀಲ್‌ ನಿವಾಸಿ ಕಿರಣ್‌ ಡಿ’ಸೋಜಾ (25) ನನ್ನು ಮಂಗಳೂರು ನಗರದ ದಕ್ಷಿಣ ಉಪವಿಭಾಗದ ಆ್ಯಂಟಿ ಡ್ರಗ್‌ ಟೀಮ್‌ ಬಂಧಿಸಿದೆ.

Advertisement

ಆತನಿಂದ 30 ಸಾವಿರ ರೂ. ಮೌಲ್ಯದ 10 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಹಿತ ಸಾಗಾಟಕ್ಕೆ ಬಳಸಿದ್ದ ಸ್ಕೂಟರ್‌ ಮತ್ತು ಮೊಬೈಲ್‌ ಫೋನ್‌ ಅನ್ನು ಕೂಡ ವಶಪಡಿಸಿಕೊಂಡಿದ್ದಾರೆ.

ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನಿಷೇಧಿತ ಮಾದಕ ವಸ್ತು ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿಯಂತೆ ಮೇಲಧಿಕಾರಿಗಳ ನಿರ್ದೇಶನದಂತೆ ಆ್ಯಂಟಿ ಡ್ರಗ್‌ ಟೀಮ್‌ನ ಸಿಬಂದಿ ಸಾಜು ನಾಯರ್‌, ಮಹೇಶ್‌, ಶಿವರಾಜ್‌, ಅಕºರ್‌ ಮತ್ತು ತಿರುಮಲೇಶ್‌ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next