Advertisement
ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23), ಸಲ್ಮಾನ್ (19), ಸೈಫ್ ಆಲಿ (27) ಎಂಬವರು ಉಳ್ಳಾಲ ದರ್ಗಾ ಸಂದರ್ಶನಕ್ಕೆಂದು ಬಂದವರು ಉಳ್ಳಾಲದ ಸಮುದ್ರ ತೀರಕ್ಕೆ ತೆರಳಿದ್ದಾರೆ. ಅಲ್ಲಿ ಸಮುದ್ರದ ನೀರಲ್ಲಿ ಆಟವಾಡುತ್ತಿದ್ದ ಸಂದರ್ಭ ಮೂವರು ಅಲೆಗಳ ನಡುವೆ ಸಿಲುಕಿದ್ದಾರೆ. ತತ್ ಕ್ಷಣ ಸ್ಥಳದಲ್ಲಿದ್ದ ಮೊಗವೀರ ಜೀವರಕ್ಷಕ ಸದಸ್ಯರು ಸಮುದ್ರಕ್ಕೆ ಧುಮುಕಿ ಸೈಫ್ ಆಲಿ ಮತ್ತು ಸಲ್ಮಾನ್ ಇಬ್ಬರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಲ್ಮಾನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ, ಬಶೀರ್ ಇನ್ನೂ ಸಮುದ್ರದಲ್ಲಿ ಪತ್ತೆಯಾಗಿಲ್ಲ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Advertisement
Ullal; ಇಬ್ಬರು ಸಮುದ್ರಪಾಲು: ಓರ್ವನ ರಕ್ಷಣೆ,ಇನ್ನೋರ್ವನಿಗಾಗಿ ಹುಡುಕಾಟ
05:02 PM Dec 29, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.