Advertisement

Ullala: ಪ್ರೇಕ್ಷಾ ಆತ್ಮಹತ್ಯೆ ಪ್ರಕರಣ; ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ

11:53 AM May 11, 2023 | Team Udayavani |

ಉಳ್ಳಾಲ: ಎರಡು ವರ್ಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ಮೇ.10ರ ರಾತ್ರಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.

Advertisement

ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20)ಆತ್ಮಹತ್ಯೆಗೈದ ಯುವಕ.

ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಸಿಟ್ ಔಟ್ ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಮೇ.10ರ ರಾತ್ರಿ 11 ರ ವೇಳೆ ಮನೆಗೆ ಬಂದಿದ್ದ ಯತಿರಾಜ್ ಚಿಕ್ಕಮ್ಮ ಮನೆಯಲ್ಲಿರದ ವೇಳೆ ನೇಣು ಬಿಗಿದಿದ್ದಾನೆ. ಇಂದು (ಮೇ.11) ಬೆಳಿಗ್ಗೆ ಯತಿರಾಜ್ ನ ಮಾವ ಹುಡುಕಾಡಿದಾಗ ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.

ಕೂಡಲೆ ಮನೆಮಂದಿ ನೇಣು ಕುಣಿಕೆ ಕಡಿದರೂ ಅದಾಗಲೇ ಯತಿರಾಜ್ ಮೃತಪಟ್ಟಿದ್ದ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next