Advertisement

Ullala; ತಲಪಾಡಿ ಗಡಿಭಾಗದಲ್ಲಿ ಆರೋಗ್ಯ ಇಲಾಖೆಯಿಂದ ಕೋವಿಡ್ ಜಾಗೃತಿ ಕಾರ್ಯಕ್ರಮ

11:56 AM Dec 21, 2023 | Team Udayavani |

ಉಳ್ಳಾಲ: ಕೇರಳದಲ್ಲಿ‌ ಕೋವಿಡ್ ರೂಪಾಂತರಿ ಜೆಎನ್ 1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗವಾದ ತಲಪಾಡಿಯಲ್ಲಿ ಆರೋಗ್ಯ ಇಲಾಖೆ ಮತ್ತು ತಲಪಾಡಿ ಗ್ರಾಮ ಪಂಚಾಯತ್ ನಿಂದ ಜಾಗೃತಿ ಕಾರ್ಯಕ್ರಮ ಗುರುವಾರದಿಂದ ಆರಂಭವಾಗಿದೆ.

Advertisement

ಕೋಟೆಕಾರು ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ, ಸಮುದಾಯ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಗಡಿಯಲ್ಲಿ ಬ್ಯಾನರ್ ಹಾಕಿ ಜಾಗೃತಿಯೊಂದಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರಿಗೆ ಮಾಹಿತಿ ನೀಡುತ್ತಿದ್ದಾರೆ.

ಧ್ವನಿವರ್ಧಕ‌ ಮೂಲಕ ಜಾಗೃತಿ: ತಲಪಾಡಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಗಡಿಭಾಗದಲ್ಲಿ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸುತ್ತಿದ್ದು, ಹಿರಿಯರು, ಗರ್ಭಿಣಿಯರು, ಆರೋಗ್ಯ ಸಮಸ್ಯೆ ಇರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಶೀತ ಕಫ ಸೇರಿದಂತೆ ಆರೋಗ್ಯ ಸಮಸ್ಯೆ ಇರುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು, ಗಡಿ ಪ್ರದೇಶದಲ್ಲಿ ಕೇರಳದಿಂದ ಬಂದಿರುವ ಪ್ರಯಾಣಿಕರು ಗುಂಪು ಸೇರದೆ ಅಂತರ ಕಾಯ್ದುಕೊಳ್ಳಬೇಕು ಎಂದು ಜಾಗೃತಿ ಮೂಡಿಸಲಾಗುತ್ತಿದೆ.

ಈ ಕುರಿತು ಕೋಟೆಕಾರು ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಗೋಪಿ ಪ್ರಕಾಶ್ ಮಾಹಿತಿ‌ ನೀಡಿ, ಆರೋಗ್ಯ ಇಲಾಖೆಯ ಗೈಡ್ ಲೈನ್ಸ್ ನಂತೆ ಗಡಿ ಭಾಗದಲ್ಲಿ ಜಾಗೃತಿ ಕಾರ್ಯ ನಡೆಸುತ್ತಿದ್ದು ಕೇರಳ ಭಾಗದಿಂದ ಬರುವ ಪ್ರಯಾಣಿಕರಿಗೆ ಸೂಚನೆಗಳನ್ನು ನೀಡಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next