ಉಳ್ಳಾಲ : ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಸ್ಕೂಟರಿನಲ್ಲಿ ಬಂದ ಆಗಂತುಕನೊರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಲಪಾಡಿ ಅಲಂಕಾರುಗುಡ್ಡೆ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಕೋಟೆಕಾರು ಬಳಿಯ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ತಲಪಾಡಿ ಚೆಕ್ ಪೋಸ್ಟ್ ಬಳಿ ಬಸ್ಸು ಹತ್ತಲು ಒಳದಾರಿಯಾಗಿ ನಡೆಕೊಂಡು ಬರುವಾಗ ಘಟನೆ ನಡೆದಿದೆ. ವಿದ್ಯಾರ್ಥಿನಿ ಗಾಬರಿಗೊಂಡು ಬೊಬ್ಬಿಟ್ಟಾಗ ಸ್ಥಳೀಯರು ಜಮಾಯಿಸುವಷ್ಟರಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಸ್ಥಳೀಯರು ವಿದ್ಯಾರ್ಥಿನಿಗೆ ಧೈರ್ಯ ತುಂಬಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ತೆರಳಿ ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಸ್ಥಳೀಯವಾಗಿ ಹಲವು ಕಾರ್ಖಾನೆಗಳಿಗೆ ವಲಸೆ ಕಾರ್ಮಿಕರು ಬಂದಿದ್ದು, ಅವರ ದಾಖಲೆಗಳನ್ನು ಪೊಲೀಸ್ ಠಾಣೆಯಲ್ಲಿ ಮಾಲೀಕರು ದಾಖಲಿಸಿರುವುದಿಲ್ಲ. ಅಲ್ಲದೆ ಈ ಭಾಗದಲ್ಲಿ ಇಂತಹ ಕೃತ್ಯಗಳು ಅನೇಕ ನಡೆಯುತ್ತಿದ್ದು, ಈ ಬಗ್ಗೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಗಮನಕ್ಕೆ ತಂದಿದ್ದರೂ, ಕ್ರಮ ವಹಿಸಿಲ್ಲ ಅನ್ನುವ ಆರೋಪ ಕೇಳಿಬಂದಿದೆ.
ಆರೋಪಿ ಕುರಿತ ಸಿಸಿಟಿವಿಯಲ್ಲಿ ದಾಖಲೆಯಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಒಮಿಕ್ರಾನ್ ಪತ್ತೆಯಾದರೆ ಬಿಗಿ ಕ್ರಮ ಖಚಿತ: ಆರ್.ಅಶೋಕ್