Advertisement

ಕುಂಪಲದ ಪ್ರೇಕ್ಷಾ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ

10:29 PM May 11, 2023 | Team Udayavani |

ಉಳ್ಳಾಲ: ಎರಡು ವರ್ಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷಾ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.

Advertisement

ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್‌ ಗಟ್ಟಿ (20)ಆತ್ಮಹತ್ಯೆಗೈದ ಯುವಕ.

ಯತಿರಾಜ್‌ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್‌ಔಟ್‌ನ ಕಬ್ಬಿಣದ ಹುಕ್ಸ್‌ ಒಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಮೇ 10ರಂದು ರಾತ್ರಿ 11ರ ವೇಳೆ ಮನೆಗೆ ಬಂದಿದ್ದ ಯತಿರಾಜ್‌ ಚಿಕ್ಕಮ್ಮ ಮನೆಯಲ್ಲಿರದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇ 11ರಂದು ಬೆಳಗ್ಗೆ ಯತಿರಾಜ್‌ನ ಮಾವ ಹುಡುಕಾಡಿದಾಗ ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next