Advertisement
ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್’ನಲ್ಲಿ ನಿರತವಾಗಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದ್ದು, ಬೆಂಕಿ ಹಬ್ಬುತ್ತಿದ್ದಂತೆ ಮನೆಯವರ ಸಮಯ ಪ್ರಜ್ಞೆಯಿಂದ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಮನೆಯು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಮನೆಯ ಪೀಠೋಪಕರಣಗಳು, ಪಾತ್ರೆಗಳು, ವಿದ್ಯುತ್ ಉಪಕರಣಗಳು, ಗೃಹ ಉಪಯೋಗಿ ಪರಿಕರಗಳು, ಮಕ್ಕಳ ಶಾಲಾ ಪಠ್ಯ ಪುಸ್ತಕ ಇನ್ನಿತರ ವಸ್ತುಗಳು ಸಂಪೂರ್ಣ ಭಸ್ಮಗೊಂಡಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ನೀಡಿ , ಸ್ಥಳೀಯರೊಂದಿಗೆ ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.
Related Articles
Advertisement