Advertisement
ಕಿನ್ಯ ಬೆಳರಿಂಗೆ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 25 ವರ್ಷಕ್ಕೂ ಹಳೆ ಕಟ್ಟಡ ಕಳೆದ ಎರಡು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿತ್ತು. ಶಾಲೆಗೆ ನೂತನ ತರಗತಿ ಕೊಠಡಿ ನಿರ್ಮಾಣ ಕಾರ್ಯ ಮುಗಿದು ಮುಂದಿನವಾರ ಉದ್ಘಾಟನೆಗೊಳ್ಳಲಿದೆ. ಈ ನಡುವೆ ಹಳೆಯ ಕಟ್ಟಡವನ್ನು ತೆರವುಗೊಳಿಸಲು ಜಿಲ್ಲಾ ಪಂಚಾಯತ್ ಮತ್ತು ಶಿಕ್ಷಣ ಇಲಾಖೆಗೆ ಶಾಲಾಭಿವೃದ್ಧಿ ಸಮಿತಿ ಮನವಿ ಸಲ್ಲಿಸಿತ್ತು. ಈ ಕಟ್ಟಡದಲ್ಲಿ ಒಟ್ಟು ಐದು ತರಗತಿಗಳಿದ್ದು, 2020ರ ಬಳಿಕ ಈ ಕಟ್ಟಡದಲ್ಲಿ ತರಗತಿಯನ್ನು ಸ್ಥಗಿತಗೊಳಿಸಲಾಗಿತ್ತು ಕೋವಿಡ್ ಬಳಿಕ 2021ರಲ್ಲಿ ಶಾಲಾ ಪ್ರಾರಂಭದ ಸಂದರ್ಭದಲ್ಲಿ ಮೂರು ತರಗತಿಗಳ ವಿದ್ಯಾರ್ಥಿಗಳನ್ನು ಸ್ಥಳೀಯ ಮದರಸ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಇದೀಗ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಸೋಮವಾರ ರಾತ್ರಿ ಸುರಿದ ಮಳೆಗೆ ಛಾವಣಿ ಮುರಿದು ಬಿದ್ದಿದ್ದು, ರಾತ್ರಿ ಘಟನೆ ನಡೆದ ಕಾರಣ ವಿದ್ಯಾರ್ಥಿಗಳು ಅಪಾಯದಿಂದ ಪಾರಾದಂತಾಗಿದೆ.
Related Articles
Advertisement
ಮೂಲಭೂತ ಸೌಕರ್ಯ ಅಗತ್ಯ ಇದೆ : ನೂತನವಾಗಿ ನಿರ್ಮಾಣಗೊಂಡಿರುವ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ಆರಂಭವಾದರೂ ಈ ಶಾಲೆಯಲ್ಲಿ ಮೂಲಭೂತ ಸೌಕರ್ಯದ ಕೊರತೆ ಇದೆ. ಇನ್ನೂ ಮೂರು ಕೊಠಡಿಗಳ ಅಗತ್ಯವಿದ್ದು, ವಿದ್ಯಾರ್ಥಿಗಳ ಭದ್ರತೆಗೆ ಸುತ್ತಲೂ ಧರೆ ನಿರ್ಮಾಣವಾಗಬೇಕಾಗಿದ್ದು, ಶೌಚಾಲಯದ ಅಗತ್ಯವೂ ಇದೆ.
ಸ್ಥಳಕ್ಕೆ ಭೇಟಿ ನೀಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಬೈಲಮೂಲೆ ಮಾತನಾಡಿ ಕುಸಿದಿರುವ ಕಟ್ಟಡ ತೆರವಿಗೆ ಜಿಲ್ಲಾ ಪಂಚಾಯತ್‍ಗೆ ಮತ್ತು ಕಂದಾಯ ಇಲಾಖೆಗೆ ಮಾಹಿತಿ ನೀಡಿದ್ದು, ಪಂಚಾಯತ್ ವತಿಯಿಂದ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಂಗಳೂರು ದಕ್ಷಿಣ ವಲಯ ಶಿಕ್ಷಣಾಧಿಕಾರಿ ಪ್ರಶಾಂತ್ ಭೇಟಿ ನೀಡಿ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹತ್ತಿರ ಹೋಗದಂತೆ ಕ್ರಮ ಕೈಗೊಳ್ಳಲಾಗಿತ್ತು. ಶಿಕ್ಷಣ ಇಲಾಖಗೆಗ ಕಟ್ಟಡ ಕುಸಿದಿರುವ ವರದಿ ನೀಡಿದ್ದು, ಸಂಪೂರ್ಣ ಕಟ್ಟಡ ತೆರವಿಗೆ ಇಲಾಖೆ ಆನುಮತಿ ನೀಡಿದೆ. ಶಾಲೆಗೆ ಮೂಲಭೂತ ಸೌಕರ್ಯದ ಸಮಸ್ಯೆಗೆ ಸಂಬಂ„ಸಿದಂತೆ ಸಂಬಂ„ತ ಇಲಾಖೆಯ ಅ„ಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದರು.