Advertisement

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

08:54 PM Dec 03, 2024 | Team Udayavani |

ಉಳ್ಳಾಲ: ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರವು ಪ್ರಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪ್ರಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್ ನ ನಟ ,ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಹೇಳಿದರು.

Advertisement

ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರದಂದು ಅವರು ಭೇಟಿ ನೀಡಿ ಡಿ.20 ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ “UI”ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು ಬಹು ನಿರೀಕ್ಷಿತ “UI”ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ.ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪ್ರಕೃತಿ ರಮಣೀಯವಾಗಿದೆ.ಕೊರಗಜ್ಜನ ದಯೆಯು ನಮ್ಮ ಮೇಲಿರಲಿ ಎಂದರು.

UI ಚಿತ್ರದ ನಿರ್ಮಾಪಕರಾದ ಕೆ.ಪಿ ಶ್ರೀಕಾಂತ್, ಲಹರಿ ವೇಲು,ನವೀನ್ ಮನೋಹರ್ ,ರಾಜೇಶ್ ಭಟ್ ಜತೆಗಿದ್ದರು.

ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ,ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next