ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಬಳಿ ಟೆಂಪೊ ರಿಕ್ಷಾ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ.
ನೀರುಮಾರ್ಗ ನಿವಾಸಿಗಳಾದ ಲೆನನ್ ಮತ್ತು ಶೋಧನ್ ಗಾಯಗೊಂಡಿದ್ದು, ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ವಿವರ : ತಲಪಾಡಿ ಕಡೆಯಿಂದ ಕೊಲ್ಯ ಕಡೆಗೆ ಟೆಂಪೋ ರಿಕ್ಷಾವೊಂದು ರಾಷ್ಟ್ರೀಯ ಹೆದ್ದಾರಿ ಕೊಲ್ಯ ಜಂಕ್ಷನ್ ಬಳಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಮಂಗಳೂರಿನಿಂದ ಕಾಸರಗೋಡು ಕಡೆ ಸಂಚರಿಸುತ್ತಿದ್ದ ಬೈಕ್ ಹೆದ್ದಾರಿಯಲ್ಲೇ ತಿರುವು ತೆಗೆಯುತ್ತಿದ್ದ ಟೆಂಪೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಸವಾರರಿಬ್ಬರು ಹೆಲ್ಮೆಟ್ ಧರಿಸಿದ್ದರಿಂದ ದೊಡ್ಡ ಅಪಘಾತವೊಂದು ತಪ್ಪಿದಂತಾಗಿದೆ. ದಕ್ಷಿಣ ಸಂಚಾರಿ ವಿಭಾಗದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ವಿಧಾನ ಸಭೆಯಲ್ಲಿ ಬಿಜೆಪಿಯ 40% ಭ್ರಷ್ಟಾಚಾರದ ವಿಷಯ ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧಾರ