Advertisement
ತಲಪಾಡಿ ಹೆದ್ದಾರಿ ಬದಿಯ ಅಶ್ರಫ್, ಕುಲದೀಪ್, ಶ್ರೀಧರ್ ಹಾಗೂ ಮಹಮ್ಮದ್, ಶಂಕರ್ ಎಂಬವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂ. ಬೆಲೆಬಾಳುವ ಸಿಗರೇಟ್ ಹಾಗೂ ನಗದು ಹಣವನ್ನು ಕಳವುಗೈದಿದ್ದು, ಅಶ್ರಫ್ ಅವರಿಗೆ ಸೇರಿದ ಝೆರಾಕ್ಸ್ ಅಂಗಡಿಯಿಂದ ನಗದು, ಕಳವುಗೈಯಲಾಗಿದೆ. ರಾತ್ರಿ ವೇಳೆ ಕಳ್ಳರು ತಮ್ಮ ಕೈಚಳಕವನ್ನು ತೋರಿಸಿದ್ದು, ಈ ಹಿಂದೆ ಇದೇ ಮಾದರಿಯಲ್ಲಿ ಮಂಜೇಶ್ವರ ಹಾಗೂ ಕುಂಜತ್ತೂರು ಭಾಗದಲ್ಲಿ ಕಳವು ಕೃತ್ಯ ನಡೆದಿದೆ. ಸ್ಥಳೀಯರು ಪೊಲೀಸರ ವೈಫಲ್ಯದಿಂದ ಇಂತಹ ಕೃತ್ಯಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ.
ಗಡಿ ಭಾಗದಲ್ಲಿ ಗಾಂಜಾ ವ್ಯಸನಿಗಳು ಸೇರಿದಂತೆ ಗಾಂಜಾ ಸಾಗಾಟ ಹೆಚ್ಚಾಗುತ್ತಿದ್ದು, ಕಳವು ಕೃತ್ಯದಲ್ಲಿ ಈ ತಂಡಗಳು ಭಾಗಿಯಾಗಿರುವ ಶಂಕೆಯಿದೆ. ಸ್ಥಳೀಯವಾಗಿ ಮಾರುತಿ ಕಾರೊಂದು ಅನುಮಾನಾಸ್ಪ ದವಾಗಿ ತಿರುಗಾಡುತ್ತಿದ್ದು, ಪೊಲೀಸರು ಈ ಪ್ರದೇಶದಲ್ಲಿ ತೀವ್ರ ನಿಗಾ ವಹಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.