ಕಲಬುರಗಿ: ಸಂಸದ ಡಾ.ಉಮೇಶ್ ಜಾಧವ್ ಎದೆನೋವಿನ ಕಾರಣದಿಂದಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದಾರೆ.
ಸೋಮವಾರ ಬೆಳಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಜಯದೇವ ಆಸ್ಪತ್ರೆಯಲ್ಲಿ ಸಂಸದರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸ್ವತಃ ಜಾಧವ್ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲ ಪರೀಕ್ಷೆಗೆ ಒಳಗಾಗಿದ್ದು, ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಭಯ ಪಡುವಂತಹದ್ದು ಏನೂ ಆಗಿಲ್ಲ. ಶೀಘ್ರದಲ್ಲೇ ಗುಣಮುಖನಾಗುತ್ತೇನೆ’ ಎಂದು ಸಂಸದ ಜಾಧವ್ ಟ್ವೀಟ್ ಮಾಡಿ ತಿಳಿಸಿದ್ದಾರೆ.