Advertisement
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ತೋಟದಲ್ಲಿರುವ ತಂದೆ ವಿಶ್ವನಾಥ ಕತ್ತಿ ಅವರ ಸಮಾಧಿ ಪಕ್ಕದಲ್ಲೇ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಠಾ ಧೀಶರು ಹಾಗೂ ಅರ್ಚಕರು ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು. ಪುತ್ರ ನಿಖೀಲ್ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಿದರು.
ಉಮೇಶ್ ಕತ್ತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಕಂಬನಿ ಮಿಡಿದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ರಾದ ಅಮಿತ್ ಶಾ, ರಾಜನಾಥ್ ಸಿಂಗ್, ಪ್ರಹ್ಲಾದ್ ಜೋಷಿ, ನಿರ್ಮಲಾ , ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ರಾಜ್ಯಾಧ್ಯಕ್ಷ ನಳಿನ್ ಕುಮಾÃ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಮುನಿರತ್ನ, ವಿ.ಸೋಮಣ್ಣ, ಆರ್.ಅಶೋಕ್, ಸುನಿಲ್ ಕುಮಾರ್, ಸಿ.ಸಿ. ಪಾಟೀಲ್, ಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸಂತಾಪ ಸೂಚಿಸಿದ್ದಾರೆ.
Related Articles
ಸೆ. 11ರಂದು ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕಾರ್ಯ ಕಾರಿಣಿ ಸಭೆ ಮುಂದೂಡಿಕೆಯಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಾಲ್ಗೊಂಡು ಮುಂಬರುವ ವಿಧಾನ ಸಭೆ ಚುನಾವಣೆ ಕುರಿತು ಚರ್ಚಿಸಲು ಬೆಂಗಳೂರಿನಲ್ಲಿ ಕಾರ್ಯ ಕಾರಿಣಿ ಸಭೆ ಕರೆಯಲಾಗಿತ್ತು. ಸಚಿವ ಉಮೇಶ್ ಕತ್ತಿ ಅಕಾಲಿಕ ನಿಧನದಿಂದ ಬಿಜೆಪಿಯ ಅಧಿಕೃತ ಕಾರ್ಯಕ್ರಮಗಳು ಬದಲಾಗಿದ್ದು, ಜೆ.ಪಿ. ನಡ್ಡಾ ಅವರ ಮುಂದಿನ ಸಮಯ ನೋಡಿಕೊಂಡು ಕಾರ್ಯಕಾರಿಣಿ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಮಧ್ಯೆ, ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿದ್ದು ಗುರುವಾರ ಬೆಳಗಾವಿಯಲ್ಲಿರುವ ಉಮೇಶ್ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿದ್ದಾರೆ.
Advertisement
ಶನಿವಾರ ಜನಸ್ಪಂದನಬೆಂಗಳೂರು: ಗುರುವಾರ ನಡೆಯಬೇಕಾಗಿದ್ದ ಸರಕಾರದ 3 ವರ್ಷಗಳ ಸಾಧನೆ ಹೇಳುವ ಜನೋತ್ಸವ ಕಾರ್ಯಕ್ರಮವನ್ನು ಉಮೇಶ್ ಕತ್ತಿ ಸಾವಿನ ಹಿನ್ನೆಲೆಯಲ್ಲಿ ಶನಿವಾರಕ್ಕೆ ಮುಂದೂಡಲಾಗಿದೆ. ಕತ್ತಿ ಸಾವಿನಿಂದಾಗಿ 3 ದಿನ ಶೋಕಾಚರಣೆ ಘೋಷಿಸಲಾಗಿದೆ. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಜನಸ್ಪಂದನ (ಜನೋತ್ಸವ) -ಸಾರ್ಥಕ ಸೇವೆ ಹಾಗೂ ಸಬಲೀಕರಣ ಕಾರ್ಯಕ್ರಮವನ್ನು ಶನಿವಾರ ಮಧ್ಯಾಹ್ನ 12 ಗಂಟೆಗೆ ನಡೆಸಲಾಗುತ್ತದೆ ಎಂದು ಸಚಿವ ಡಾ| ಸುಧಾಕರ್ ಹೇಳಿದ್ದಾರೆ. ಕತ್ತಿ ಸಾವಿನ ಹೊರತಾಗಿಯೂ ಸರಕಾರ ಗುರುವಾರದ ಕಾರ್ಯಕ್ರಮವನ್ನು ನಿಗದಿಯಂತೆಯೇ ನಡೆಸಲು ತೀರ್ಮಾನಿಸಿ, ಕೇವಲ ಒಂದು ದಿನ ಶೋಕಾಚರಣೆ ಘೋಷಿಸಿತ್ತು. ಅದಕ್ಕೆ ಟೀಕೆ ಕೇಳಿಬಂದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಬದಲಾವಣೆ ಮಾಡಬೇಕಾಯಿತು.