Advertisement
ತಾಲೂಕಿನ ಶಿವನಸಮುದ್ರದ ವಿಶ್ವವಿಖ್ಯಾತ ಗಗನಚುಕ್ಕಿ ಜಲಪಾತ ಹಾಗೂ ಜಲವಿದ್ಯುತ್ ಸ್ಥಾವರ ವೀಕ್ಷಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೇವಲ ಗಾಸಿಫ್ ಅಷ್ಟೇ. ಬಿ.ಎಸ್.ಯಡಿಯೂರಪ್ಪ ಅವರ ನಂತರ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಅವರ ಸರ್ಕಾರದಲ್ಲಿ ಸಚಿವನಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಆ ವೇಳೆ ನಾನು ಸಹ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Related Articles
Advertisement
ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಜನರ ಅನುಕೂಲಕ್ಕಾಗಿ ಮೇಕೆದಾಟು ಯೋಜನೆಯ ಅವಶ್ಯಕತೆ ಇದೆ. ಹೀಗಾಗಿ ಯೋಜನೆಯನ್ನು ಜಾರಿ ಮಾಡಲು ತಮಿಳುನಾಡು ಸರ್ಕಾರ ಅವಕಾಶ ಮಾಡಿಕೊಡಬೇಕು. ಮೇಕೆದಾಟು ಯೋಜನೆ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಿದರು.
ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಯು.ಪಿ.ಸಿಂಗ್, ಉಪ ಸಂರಕ್ಷಣಾ ಅಧಿಕಾರಿಗಳಾದ ನಂದೀಶ್, ವಿ.ಏಡುಕೊಂಡಲು, ಸಂತೋಷ್ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ನಾಗೇಂದ್ರ ಪ್ರಸಾದ್, ವಲಯ ಅರಣ್ಯಾಧಿಕಾರಿ ಎನ್.ಸಿ.ಮಹದೇವುಗೌಡ, ಆಹಾರ ಇಲಾಖೆ ಉಪನಿರ್ದೇಶಕ ಎಂ.ಪಿ.ಕುಮಾರ್, ಯೋಗಾನಂದ್, ಕೆ.ಎಂ.ಮಹದೇವಸ್ವಾಮಿ ಇದ್ದರು.