Advertisement

2023ರಲ್ಲಿ ನಮ್ಮದೇ ಸರಕಾರ ಅಸ್ತಿತ್ವಕ್ಕೆ : ನಾನು ಸಿಎಂ ಆಕಾಂಕ್ಷಿ ಎಂದ ಸಚಿವ ಕತ್ತಿ

07:31 AM Aug 09, 2022 | Team Udayavani |

ಮಳವಳ್ಳಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಕೇವಲ ಊಹಾಪೋಹ ಅಷ್ಟೇ. ಮುಂದಿನ ವಿಧಾನಸಭಾ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸುತ್ತೇವೆ. 2023ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದರು.

Advertisement

ತಾಲೂಕಿನ ಶಿವನಸಮುದ್ರದ ವಿಶ್ವವಿಖ್ಯಾತ ಗಗನಚುಕ್ಕಿ ಜಲಪಾತ ಹಾಗೂ ಜಲವಿದ್ಯುತ್ ಸ್ಥಾವರ ವೀಕ್ಷಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೇವಲ ಗಾಸಿಫ್ ಅಷ್ಟೇ. ಬಿ.ಎಸ್.ಯಡಿಯೂರಪ್ಪ ಅವರ ನಂತರ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಅವರ ಸರ್ಕಾರದಲ್ಲಿ ಸಚಿವನಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಆ ವೇಳೆ ನಾನು ಸಹ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ನಮ್ಮ ಪಕ್ಷಕ್ಕೆ ಮತ್ತೆ ಬಹುಮತ ಬರಲಿದ್ದು, ಆಗ ಮುಖ್ಯಮಂತ್ರಿ ಸ್ಥಾನ ನೀಡಲು ವರಿಷ್ಠರ ಬಳಿ ಮನವಿ ಮಾಡುವೆ. ಏಕೆಂದರೆ 8 ಬಾರಿ ಶಾಸಕನಾಗಿ ಆಯ್ಕೆಯಾಗಿ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿರುವೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಿ ನಾಡಿನ ಜನರ ಸೇವೆ ಮಾಡಲು ಹಂಬಲ ಹೊಂದಿರುವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಹಿರಿಯ ನಾಯಕರಾಗಿದ್ದು, ಅವರ ಮಾರ್ಗದರ್ಶನ ನಮಗೆ ಅಗತ್ಯವಿದೆ. ಅವರನ್ನು ಪಕ್ಷ ಎಂದಿಗೂ ಕಡೆಗಣಿಸುವುದಿಲ್ಲ ಎಂದರು.

ಇದನ್ನೂ ಓದಿ : ಒಂದು ಕೋಟಿ ಡುಪ್ಲಿಕೇಟ್‌ ಎಂಟ್ರಿ ಡಿಲೀಟ್‌: ಸಮಗ್ರ ಡಿಜಿಟಲ್‌ ದತ್ತಾಂಶ ರೂಪಿಸಲು ಕ್ರಮ

ರಾಜ್ಯದಲ್ಲಿನ 9.94 ಲಕ್ಷ ಹೆಕ್ಟೇರ್ ಡೀಮ್ಡ್ ಅರಣ್ಯ ಪ್ರದೇಶದ ಪೈಕಿ 3.30 ಲಕ್ಷ ಹೆಕ್ಟೇರ್ ಡೀಮ್ಡ್ ಅರಣ್ಯ ಪ್ರದೇಶವನ್ನು ಅರಣ್ಯ ಇಲಾಖೆಗೆ ತೆಗೆದುಕೊಳ್ಳುವ ಬಗ್ಗೆ ಈಗಾಗಲೇ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಉಳಿದ 6.60 ಲಕ್ಷ ಹೆಕ್ಟೇರ್ ಡೀಮ್ಡ್ ಪ್ರದೇಶವನ್ನು ಕಂದಾಯ ಇಲಾಖೆಗೆ ನೀಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.

Advertisement

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಜನರ ಅನುಕೂಲಕ್ಕಾಗಿ ಮೇಕೆದಾಟು ಯೋಜನೆಯ ಅವಶ್ಯಕತೆ ಇದೆ. ಹೀಗಾಗಿ ಯೋಜನೆಯನ್ನು ಜಾರಿ ಮಾಡಲು ತಮಿಳುನಾಡು ಸರ್ಕಾರ ಅವಕಾಶ ಮಾಡಿಕೊಡಬೇಕು. ಮೇಕೆದಾಟು ಯೋಜನೆ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಿದರು.

ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಯು.ಪಿ.ಸಿಂಗ್, ಉಪ ಸಂರಕ್ಷಣಾ ಅಧಿಕಾರಿಗಳಾದ ನಂದೀಶ್, ವಿ.ಏಡುಕೊಂಡಲು, ಸಂತೋಷ್ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ನಾಗೇಂದ್ರ ಪ್ರಸಾದ್, ವಲಯ ಅರಣ್ಯಾಧಿಕಾರಿ ಎನ್.ಸಿ.ಮಹದೇವುಗೌಡ, ಆಹಾರ ಇಲಾಖೆ ಉಪನಿರ್ದೇಶಕ ಎಂ.ಪಿ.ಕುಮಾರ್, ಯೋಗಾನಂದ್, ಕೆ.ಎಂ.ಮಹದೇವಸ್ವಾಮಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next