Advertisement
ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾಗಿದ್ದ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ಮನಸ್ಸಿಗೆ ಅತೀವ ದುಃಖವುಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓ ಶಾಂತಿ. ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ.
Related Articles
Advertisement
ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾದ ಶ್ರೀ ಉಮೇಶ್ ಕತ್ತಿ ಅವರ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ. ಜನತಾ ಪರಿವಾರದ ಹಿರಿಯರಾಗಿದ್ದ ಶ್ರೀ ಕತ್ತಿ ಅವರು ಸ್ನೇಹಜೀವಿ ಆಗಿದ್ದರಲ್ಲದೆ, ತಮ್ಮ ನೇರ ನಡೆ ನುಡಿಯಿಂದ ನಮ್ಮೆಲ್ಲರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದರು. ಶ್ರೀ ಉಮೇಶ್ ಕತ್ತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸಚಿವ ಉಮೇಶ ಕತ್ತಿ ಅವರ ನಿಧನಕ್ಜೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸಂತಾಪ ಸೂಚಿಸಿದ್ದಾರೆ. ಉತ್ತರ ಕರ್ನಾಟಕ ದ ಹಿರಿಯ ನಾಯಕರಾಗಿದ್ದ ಕತ್ತಿಯವರ ಅಕಾಲಿಕ ಸಾವು ರಾಜಕೀಯ ವಲಯಕ್ಜೆ ತುಂಬಲಾಗದ ನಷ್ಟವಾಗಿದೆ ಎಂದು ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಪಕ್ಷದ ಹಿರಿಯ ನಾಯಕರು, ರಾಜ್ಯ ಸಚಿವರಾದ ಮಾನ್ಯ ಶ್ರೀ ಉಮೇಶ್ ಕತ್ತಿಯವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ದೇವರು ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.
ರಾಜ್ಯ ಸಚಿವ ಸಂಪುಟದ ಸದಸ್ಯ, ಆಹಾರ ಮತ್ತು ಅರಣ್ಯ ಖಾತೆ ಸಚಿವ ಶ್ರೀ ಉಮೇಶ್ ಕತ್ತಿಯವರ ನಿಧನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಿರಿಯ ಸಂಪುಟ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನ ತೀವ್ರ ದುಃಖ ತಂದಿದೆ. ರಾಜಕೀಯ ಹಾಗೂ ಜನಸೇವೆಯಲ್ಲಿ ಅಪಾರ ಅನುಭವ ಹೊಂದಿದ್ದ ನಾಯಕರನ್ನು ಕಳೆದುಕೊಂಡು ನಾಡು ಇಂದು ಬರಿದಾಗಿದೆ. ಭಗವಂತ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ. ಎಂದು ಅರೋಗ್ಯ ಸಚಿವ ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.