Advertisement

Umesh Reddy: 30 ದಿನ ಪೆರೋಲ್‌ ಕೇಳಿದ್ದ ಉಮೇಶ್‌ ರೆಡ್ಡಿ ಅರ್ಜಿ ವಜಾ

11:35 AM Feb 28, 2024 | Team Udayavani |

ಬೆಂಗಳೂರು: ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಉಮೇಶ್‌ ರೆಡ್ಡಿ 30 ದಿನ ಪೆರೋಲ್‌ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈ ಕೋರ್ಟ್‌ ವಜಾಗೊಳಿಸಿದೆ.

Advertisement

ಉಮೇಶ್‌ರೆಡ್ಡಿಯ ತಾಯಿ ಅನಾರೋಗ್ಯಕ್ಕೆ ತುತ್ತಾಗಿದ್ದು, ತಾಯಿಯೊಂದಿಗೆ ಇರಲು 30 ದಿನ ಗಳ ಕಾಲ ಪೆರೋಲ್‌ ನೀಡುವಂತೆ ಕೋರಿ ಉಮೇಶ್‌ ರೆಡ್ಡಿ ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಪೆರೋಲ್‌ ನೀಡಲು ನಿರಾಕರಿಸಿದೆ.

ಆಸ್ಪಾಕ್‌ ವಿರುದ್ಧದ ರಾಜಸ್ಥಾನ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪನ್ನು ನ್ಯಾಯ ಪೀಠವು ಉಲ್ಲೇಖೀಸಿದೆ. ಪ್ರಕರಣದಲ್ಲಿ ಅರ್ಜಿದಾರರಿಗೆ ಪೆರೋಲ್‌ ನೀಡಬೇಕಾದಲ್ಲಿ ಸಾರ್ವಜನಿಕ ಹಿತಾ ಸಕ್ತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು. ಹೀಗಾಗಿ ಅರ್ಜಿದಾರರಿಗೆ ಪೆರೋಲ್‌ ನೀಡಿದಲ್ಲಿ ಮತ್ತೆ ಅಪರಾಧ ಪ್ರವೃತ್ತಿಯನ್ನು ಹೊಂದಿರಬಹುದು ಅಥವಾ ಕಾನೂನು ಸುವ್ಯವಸ್ಥೆಗೆ ಅಪಾಯವನ್ನುಂಟು ಮಾಡಬಹುದು ಎಂದು ಅಭಿಪ್ರಾಯಪಟ್ಟಿದೆ. ಜೈಲು ಅಧಿಕಾರಿಗಳ ದಾಖಲೆಗಳನ್ನು ಪರಿಶೀಲಿಸಿರುವ ಸುಪ್ರೀಂ ಕೋರ್ಟ್‌ ಅರ್ಜಿ ದಾರರು ಜೈಲಿನಿಂದ ಹೊರ ಬಂದಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ತಿಳಿಸಿದೆ ಎಂಬ ಅಂಶವನ್ನು ಉಲ್ಲೇಖೀಸಿ ಅರ್ಜಿ ವಜಾಗೊಳಿಸಿ ನ್ಯಾಯಪೀಠ ಆದೇಶಿಸಿದೆ.

ಮನೆ ದುರಸ್ತಿಯಲ್ಲಿದ್ದು ಅದನ್ನು ಸರಿ ಪಡಿಸುವುದಕ್ಕಾಗಿ ಪೆರೋಲ್‌ ನೀಡಬೇಕು ಎಂದು ಅರ್ಜಿದಾರರ ಮತ್ತೂಂದು ಮನವಿಯನ್ನು ತಿರಸ್ಕರಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಇಬ್ಬರು ಸಹೋದರರಿದ್ದು, ತಾಯಿಯನ್ನು ನೋಡಿಕೊಳ್ಳುತ್ತಾರೆ. ಮನೆ ದುರಸ್ತಿಯನ್ನೂ ಮಾಡುತ್ತಾರೆ. ಅರ್ಜಿದಾರರ ನೀಡಿರುವ ಎರಡೂ ಕಾರಣಗಳು ಸಮರ್ಥವಾಗಿಲ್ಲ ಎಂದು ತಿಳಿಸಿ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next