Advertisement

ತೀಸ್ತಾ ಸೆಟಲ್ವಾಡ್ ಬಂಧನವನ್ನು ಖಂಡಿಸಿದ ವಿಶ್ವಸಂಸ್ಥೆಯ ಅಧಿಕಾರಿ

08:11 PM Jun 26, 2022 | Team Udayavani |

ನವದೆಹಲಿ : ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಬಂಧನವನ್ನು ಖಂಡಿಸಿದ್ದು, “ಮಾನವ ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ” ಎಂದು ಹೇಳಿದ್ದಾರೆ.

Advertisement

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ರಕ್ಷಕರ ವಿಶೇಷ ವರದಿಗಾರ್ತಿ ಮೇರಿ ಲಾಲರ್, “ತೀಸ್ತಾ ದ್ವೇಷ ಮತ್ತು ತಾರತಮ್ಯದ ವಿರುದ್ಧ ಬಲವಾದ ಧ್ವನಿಯಾಗಿದ್ದಾರೆ” ಎಂದು ಅವರ ಬಂಧನದ ಕುರಿತು ಆಳವಾದ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

2002ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರಿಗೆ ಎಸ್‌ಐಟಿ ನೀಡಿದ್ದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಸೆಟಲ್ವಾಡ್ ಅವರ ಎನ್‌ಜಿಒ, ಝಾಕಿಯಾ ಜಾಫ್ರಿ ಅವರ ಕಾನೂನು ಹೋರಾಟದ ಉದ್ದಕ್ಕೂ ಬೆಂಬಲಿಸಿತ್ತು. ಗಲಭೆಯಲ್ಲಿ ಜಾಫ್ರಿ ಅವರ ಪತಿ ಎಹ್ಸಾನ್ ಜಾಫ್ರಿ ಹತ್ಯೆಗೀಡಾಗಿದ್ದರು.

ಕ್ರೈಂ ಬ್ರಾಂಚ್‌ನಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಶನಿವಾರ ಮುಂಬಯಿ ನಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ನಾಗರಿಕ ಹಕ್ಕುಗಳ ಕಾರ್ಯಕರ್ತೆ ಮತ್ತು ಪತ್ರಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next