Advertisement

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

11:06 PM Jun 15, 2024 | Team Udayavani |

ಪಡುಬಿದ್ರಿ: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ 2023-24ನೇ ಸಾಲಿನಲ್ಲಿ ನಡೆದ 24 ಕಂಬಳ ಕೂಟಗಳಿಗೆ ಸರಕಾರದಿಂದ ಬರಬೇಕಿದ್ದ ತಲಾ 5 ಲಕ್ಷ ರೂ. ಅನುದಾನ ಇದುವರೆಗೂ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಎಲ್ಲ ಕಂಬಳದ ವ್ಯವಸ್ಥಾಪಕರು ಹಾಗೂ ಜಿಲ್ಲಾ ಸಮಿತಿಯ ತುರ್ತು ಸಮಾಲೋಚನೆ ಸಭೆಯನ್ನು ಜೂ. 16ರ ಅಪರಾಹ್ನ 3 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಕರೆಯಲಾಗಿದೆ.

Advertisement

ಅನುದಾನಕ್ಕಾಗಿ ಜಿಲ್ಲಾ ಕಂಬಳ ಸಮಿತಿಯು ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ ಸರಕಾರ ಅದನ್ನು ಪರಿಗಣಿಸಿಲ್ಲ. ಆದ್ದರಿಂದ ನಮ್ಮ ಮುಂದಿನ ನಡೆಯ ಬಗ್ಗೆ ಚರ್ಚಿಸಲು ದ.ಕ., ಉಡುಪಿ, ಕಾಸರಗೋಡು ಜಿಲ್ಲೆಗಳ ಎಲ್ಲ ಜೋಡುಕರೆ ಕಂಬಳ ವ್ಯವಸ್ಥಾಪಕರು ಪಾಲ್ಗೊಳ್ಳಬೇಕು ಎಂದು ಕಂಬಳ ಸಮಿತಿಗಳ ಪದಾಧಿಕಾರಿಗಳು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next