Advertisement

ನಗರದಲ್ಲಿ ಅನಧಿಕೃತ ಫ್ಲೆಕ್ಸ್‌: ಬಿಜೆಪಿ ದೂರು

05:27 AM Jul 02, 2020 | Lakshmi GovindaRaj |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್‌ ಅವರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಅನಧಿಕೃತ ಬ್ಯಾನರ್‌ ಮತ್ತು ಫ್ಲೆಕ್ಸ್‌ಗಳನ್ನು ಹಾಕಲಾಗಿದ್ದು, ಈ ಬಗ್ಗೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಕೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಬೆಂಗಳೂರು ಯುವ ಮೋರ್ಚಾ ಕಾರ್ಯಕರ್ತರು ಮೇಯರ್‌ ಎಂ. ಗೌತಮ್‌ಕುಮಾರ್‌ ಅವರಿಗೆ ಬುಧವಾರ ದೂರು ನೀಡಿದರು.

Advertisement

ದೂರು ಸಲ್ಲಿಸಿದ ನಂತರ ಪ್ರತಿಕ್ರಿಯಿ ಸಿದ ಬಿಜೆಪಿ ಜಿಲ್ಲಾ  ಘಟಕದ ಅಧ್ಯಕ್ಷ ಎಂ. ಅಭಿಲಾಷ್‌ ರೆಡ್ಡಿ, ನಗರದಲ್ಲಿ ಫ್ಲೆಕ್ಸ್‌ ಹಾಗೂ ಬ್ಯಾನರ್‌ ಅಳವಡಿಸುವಂತಿಲ್ಲ ಎನ್ನುವ ಸ್ಪಷ್ಟ ಆದೇಶವಿದ್ದರೂ ನಗರಾ ದ್ಯಂತ ಅನಧಿಕೃತವಾಗಿ ಫ್ಲೆಕ್ಸ್‌ ಹಾಗೂ ಬ್ಯಾನರ್‌ಗಳನ್ನು ಹಾಕಲಾಗಿದೆ. ಈ ಮೂಲಕ ಕಾಂಗ್ರೆಸ್‌  ನಗರದ ಸೌಂದರ್ಯ ವನ್ನು ಹಾಳುಮಾಡುತ್ತಿದೆ. ಇದನ್ನು ಮೇಯರ್‌ ಗಮನಕ್ಕೆ ತರಲಾಗಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಪದಾಧಿಕಾರಿಗಳಾದ ವಿಜಯೇಂದ್ರ ಮತ್ತು ಆರ್‌. ರಾಜೇಶ್‌ ಇತರರಿದ್ದರು.

ಅನಧಿಕೃತವಾಗಿ ಫ್ಲೆಕ್ಸ್‌, ಬ್ಯಾನರ್‌ ಅಳವಡಿಕೆ ಬಗ್ಗೆ ದೂರು ಬಂದಿದ್ದು, ತೆರವು ಮಾಡುವಂತೆ ಹಾಗೂ ಸಂಬಂಧ ಪಟ್ಟವರ ಮೇಲೆ ಎಫ್ಐಆರ್‌ ದಾಖಲಿಸಲು ಎಲ್ಲ ವಲಯದ ಜಂಟಿ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. 
-ಬಿ.ಎಚ್‌.ಅನಿಲ್‌ಕುಮಾರ್‌, ಬಿಬಿಎಂಪಿ ಆಯುಕ್ತ

Advertisement

Udayavani is now on Telegram. Click here to join our channel and stay updated with the latest news.

Next