Advertisement

Mangaluru: ಅನುಮತಿ ರಹಿತ ಪ್ರತಿಭಟನೆ: ಹಲವರ ವಿರುದ್ಧ ಪ್ರಕರಣ

11:07 PM Nov 27, 2024 | Team Udayavani |

ಮಂಗಳೂರು: ಪೊಲೀಸರು ಅನುಮತಿ ನಿರಾಕರಿಸಿದರೂ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮುನೀರ್‌ ಕಾಟಿಪಳ್ಳ ಸಹಿತ ಹಲವರ ವಿರುದ್ಧ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ರಾಷ್ಟ್ರೀಯ ಹೆದ್ದಾರಿ ದುರಸ್ತಿ, ಕೂಳೂರು ಸೇತುವೆ ಕಾಮಗಾರಿ ತ್ವರಿತಗೊಳಿಸಲು ಮತ್ತು ನಂತೂರು ಮೇಲ್ಸೇತುವೆ ಕಾಮಗಾರಿ ಕಾಲಮಿತಿಯಲ್ಲಿ ನಡೆಸಲು ಆಗ್ರಹಿಸಿ ಟೋಲ್‌ಗೋಟ್‌ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಅನುಮತಿ ನಿರಾಕರಿಸಿ ಸೂಚನೆ ನೀಡಿದ್ದರೂ ಅದನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next