Advertisement

ಅನಧಿಕೃತ ಧಾರ್ಮಿಕ ಕಟ್ಟಡ ತೆರವು

04:31 PM Jan 15, 2020 | Suhan S |

ದೇವನಹಳ್ಳಿ: ರಸ್ತೆ, ಉದ್ಯಾನವನ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡ ತೆರವುಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಸೂಚಿಸಿದ್ದಾರೆ.

Advertisement

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸುಪ್ರೀಂ ಕೋರ್ಟ್‌ ನಿರ್ದೇ ಶನದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಗಳ ತೆರವುಗೊಳಿಸುವ ಕುರಿತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ಕುರಿತು ಮಾತನಾಡಿದರು. 2009ರ ನಂತರ ರಸ್ತೆ, ಸಾರ್ವಜನಿಕ ಉದ್ಯಾನವನ ಹಾಗೂ ಸಾರ್ವಜನಿಕ

ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ದೇವಸ್ಥಾನ, ಮಸೀದಿ, ಚರ್ಚ್‌ ಹಾಗೂ ಇನ್ನಿತರ ಧಾರ್ಮಿಕ ಕಟ್ಟಡಗಳನ್ನು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ತೆರವುಗೊಳಿಸಲಾಗುವುದು. ಈ ಸಂಬಂಧ ಅನಧಿಕೃತವಾಗಿ ಧಾರ್ಮಿಕ ಕಟ್ಟಗಳನ್ನು ನಿರ್ಮಾಣ ಮಾಡಿರುವವರು ಸ್ವಯಂ ಪ್ರೇರಿತವಾಗಿ ತೆರವುಗೊಳಿಸ ಬೇಕು. ಇಲ್ಲದಿದ್ದರೆ ಸರಕಾರದಿಂದಲೇ ತೆರವುಗೊಳಿಸಲಾಗುವುದು. ಕಟ್ಟಡ ಗಳನ್ನು ತೆರವುಗೊಳಿಸುವಾಗ ಅಧಿಕಾರಿಗಳ ವಿರುದ್ಧ  ಅಥವಾ ಪ್ರತಿಭಟನೆ ಮಾಡುವುದಾಗಲ್ಲ ಮಾಡಬಾರದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್‌ ಕೆ.ನಾಯಕ್‌, ಜಿಲ್ಲಾಧಿಕಾರಿ ಕಚೇರಿ ಸಹಾಯಕ ನರಸಿಂಹಮೂರ್ತಿ ಹಾಗೂಇತರೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next