ಭಾರತೀನಗರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ರಾಷ್ಟ್ರೀಯ ಪಕ್ಷಗಳಿಗೆ ಅಥವಾ ಪ್ರಾದೇಶಿಕ ಪಕ್ಷಗಳಿಗೆ ಬೆಂಬಲ ನೀಡಲು ನಿರ್ಧರಿಸಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು.
Advertisement
ಭಾರತೀನಗರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ದರು. ಅಭಿಷೇಕ್ ಅಂಬರೀಶ್ ಮಂಡ್ಯ ಅಥವಾ ಮದ್ದೂರಿನಲ್ಲಿ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗೆ, ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ, ಅಂತಹ ಸಂದರ್ಭ ಬಂದರೆ ನಾನೇ ಮಾಧ್ಯಮದವರಿಗೆ ತಿಳಿಸುತ್ತೇನೆ ಎಂದರು.