Advertisement
ಬಿಹಾರದ ಖಗರಿಯಾದಲ್ಲಿ ಆಗುವನಿ ಸುಲ್ತಂಗಂಜ್ ಗಂಗಾ ಸೇತುವೆಯನ್ನು 1,717 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿತ್ತು. ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ಈ ಕುಸಿತ ಸಂಭವಿಸಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಮತ್ತು ಕುಸಿತಕ್ಕೆ ಕಾರಣರಾದವರನ್ನು ಗುರುತಿಸುವಂತೆ ಕೇಳಿದ್ದಾರೆ. ಪುಲ್ ನಿರ್ಮಾಣ್ ನಿಗಮದಿಂದ ವರದಿ ಕೇಳಲಾಗಿದೆ.
ವರದಿಗಳ ಪ್ರಕಾರ, ಸೇತುವೆಯ ಕನಿಷ್ಠ 3 ಅಡಿ ಭಾಗವು ಕೆಳಗೆ ಗಂಗಾ ನದಿಗೆ ಕುಸಿದಿದೆ. ಏಪ್ರಿಲ್‌ನಲ್ಲಿ ಚಂಡಮಾರುತದಿಂದಾಗಿ ಸೇತುವೆಗೆ ಸ್ವಲ್ಪ ಹಾನಿಯಾಗಿತ್ತು. ಸೇತುವೆಯ ಮಧ್ಯ ಭಾಗವನ್ನು ಖಗಾರಿಯಾ, ಆಗುವನಿ ಮತ್ತು ಸುಲ್ತಂಗಂಜ್ ನಡುವೆ ಗಂಗಾ ನದಿಯ ಮೇಲೆ ನಿರ್ಮಿಸಲಾಗುತ್ತಿತ್ತು. ಎರಡು ವರ್ಷಗಳ ಹಿಂದೆಯೂ ಸೇತುವೆಯ ಒಂದು ಭಾಗ ಕುಸಿದಿತ್ತು. ಬಿಜೆಪಿ ಟೀಕೆ
ಸೇತುವೆ ಕುಸಿತದ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಕ್ರಮವಾಗಿ ಸಿಎಂ ಮತ್ತು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ ಎಂದು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಪ್ರಶ್ನಿಸಿದ್ದಾರೆ.
Related Articles
Advertisement