Advertisement

ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ  

01:38 PM Mar 28, 2021 | Team Udayavani |

ಹರಿಯಾಣ : ಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇ ಬಳಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದು, ಮೂವರು ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

Advertisement

ಇಂದು ಮುಂಜಾನೆ 7.30ರ ಸಮಯದಲ್ಲಿ ಫ್ಲೈಓವರ್ ಕುಸಿದು ಬಿದ್ದಿದೆ. ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಸುಮಾರು 9,000 ಕೋಟಿ ರೂ. ವೆಚ್ಚದಲ್ಲಿ 27.6 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. 2007 ರಲ್ಲಿ ಈ ಯೋಜನೆ ರೂಪಿಸಲಾಗಿದೆ.  ಘಟನೆ ನಡೆದ ಸಂದರ್ಭದಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿರಲಿಲ್ಲ ಎಂದು ಯೋಜನಾ ನಿರ್ದೇಶಕ ನಿರ್ಮನ್ ಜಂಬುಲ್ಕರ್ ತಿಳಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೇಲ್ಸೇತುವೆ ಕುಸಿದುಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಗೊಂಡಿದ್ದ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next