Advertisement

Uttarkashi; ನಿರ್ಮಣ ಹಂತದ ಸುರಂಗ ಕುಸಿತ: ಒಳಗೆ ಸಿಕ್ಕಿ ಬಿದ್ದಿದ್ದಾರೆ 36 ಕಾರ್ಮಿಕರು

02:34 PM Nov 12, 2023 | Team Udayavani |

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗವೊಂದು ಶನಿವಾರ ರಾತ್ರಿ ಕುಸಿದು ಬಿದ್ದ ಪರಿಣಾಮ ಕನಿಷ್ಠ 36 ಕಾರ್ಮಿಕರು ಅದರೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

Advertisement

ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್) ತಂಡಗಳು ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾದಿಂದ ದಾಂಡಲ್‌ಗಾಂವ್‌ಗೆ ಸಂಪರ್ಕಿಸುವ ಸುರಂಗದಲ್ಲಿ ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಘಟನೆಯ ಬಗ್ಗೆ ತಿಳಿದಾಗಿನಿಂದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ಸ್ಥಳದಲ್ಲಿದ್ದಾರೆ. ಎಲ್ಲರೂ ಸುರಕ್ಷಿತವಾಗಿ ಮರಳಲಿ ಎಂದು ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಅವಶೇಷಗಳನ್ನು ಕತ್ತರಿಸಲು ಡ್ರಿಲ್ಲಿಂಗ್ ಯಂತ್ರಗಳನ್ನು ವ್ಯವಸ್ಥೆ ಮಾಡಲಾಗುತ್ತಿದೆ ಮತ್ತು ಆಮ್ಲಜನಕ ಪೈಪ್‌ ಗಳನ್ನು ಒಳಗೆ ಕಳುಹಿಸಲಾಗಿದೆ. ಅಧಿಕಾರಿಗಳ ಪ್ರಸ್ತುತ ಅಂದಾಜಿನ ಪ್ರಕಾರ, ಕಾರ್ಮಿಕರನ್ನು ಸ್ಥಳಾಂತರಿಸಲು 2-3 ದಿನಗಳು ಬೇಕಾಗಬಹುದು.

Advertisement

ಉತ್ತರಕಾಶಿ ಎಸ್ಪಿ ಅರ್ಪಣ್ ಯದುವಂಶಿ ಮಾತನಾಡಿ, ಸುರಂಗ ಪ್ರಾರಂಭದ ಸ್ಥಳದಿಂದ ಸುಮಾರು 200 ಮೀಟರ್ ಮುಂದೆ ಒಡೆದಿದೆ.

ಎಸ್ ಡಿಆರ್ಎಫ್ ನ ಕಮಾಂಡರ್ ಮಣಿಕಾಂತ್ ಮಿಶ್ರಾ ಅವರು ತಮ್ಮ ಸಿಬ್ಬಂದಿ ಇತರ ರಕ್ಷಣಾ ಘಟಕಗಳೊಂದಿಗೆ ಸಮನ್ವಯದೊಂದಿಗೆ ಸಮರೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next