ಸುಳ್ಯ : ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಬಿಎಲ್‌ಎ ಬೂತ್ ಅಧ್ಯಕ್ಷರು ಹಾಗೂ ಉಸ್ತುವಾರಿಗಳಿಗೆ ತರಬೇತಿ ನೀಡುವ ಮೂಲಕ ಪಕ್ಷ ಬಲವರ್ಧನೆ ನಡೆಯುತ್ತಿದೆ. ರಾಜ್ಯ ಉಸ್ತುವಾರಿ ಯವರ ಸೂಚನೆಯಂತೆ ಮುನ್ನಡೆ ಯುತ್ತಿದ್ದೇವೆ ಎಂದು ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರು ಹೇಳಿದ್ದಾರೆ.
ಗುರುವಾರ ಸುಳ್ಯದಲ್ಲಿ ಜರಗಿದ ಬಿಎಲ್‌ಎ ಬೂತ್ ಅಧ್ಯಕ್ಷರು ಹಾಗೂ ಉಸ್ತುವಾರಿಗಳ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರನ್ನು ನೇಮಿಸಿದ ಬಳಿಕ ಪಕ್ಷ ಕಾರ್ಯಕರ್ತ ರಲ್ಲಿ ಹೊಸ ಹುಮ್ಮಸ್ಸು ಬಂದಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ರಾಜ್ಯದ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಸೂಚನೆ ಪಾಲಿಸುತ್ತಿದ್ದೇವೆ ಎಂದರು.
ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ನೂತನ ಅಧ್ಯಕ್ಷ ಪಿ.ಸಿ. ಜಯರಾಮ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ದಿವ್ಯಪ್ರಭಾ ಚಿಲ್ತಡ್ಕ, ತರಬೇತುದಾರರಾದ ಮಹಾಬಲ ಮಾರ್ಲ, ನವಾಝ್ ಅತ್ತಾವರ, ಚಂದ್ರಶೇಖರ್, ಜಿಲ್ಲಾ ಉಸ್ತುವಾರಿಗಳಾದ ಮಹೇಶ್ ರೈ, ವೇದನಾಥ ಸುವರ್ಣ, ಉಮೇಶ್ ಆಚಾರ್ಯ, ತಾಲೂಕು ಮಹಿಳಾ ಘಟಕಾಧ್ಯಕ್ಷೆ ಗೀತಾ ಕೋಲ್ಚಾರ್, ಅಲ್ಪಸಂಖ್ಯಾಕರ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ನಡುವಡ್ಕ, ಜಿಲ್ಲಾ ಮುಖಂಡ ಮಹಮ್ಮದ್ ಕುಂಞಿ ಗೂನಡ್ಕ, ಪ್ರಧಾನ ಕಾರ್ಯದರ್ಶಿ ಶ್ರೀಹರಿ ಕುಕ್ಕುಡೇಲು ಉಪಸ್ಥಿತರಿದ್ದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಧರ್ಮಪಾಲ ಕೊಯಿಂಗಾಜೆ ನಿರೂಪಿಸಿದರು.
ಸಮ್ಮಾನ
ರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ನೂತನ ಅಧ್ಯಕ್ಷ ಪಿ.ಸಿ. ಜಯರಾಮ್ ಮತ್ತು ಸದಸ್ಯರನ್ನು ಪಕ್ಷದ ವತಿಯಿಂದ ಗೌರವಿಸಲಾಯಿತು.