Advertisement
ನಾಡಗೀತೆಯೊಂದಿಗೆ ಆರಂಭವಾಗಿ, ಕನ್ನಡ ಗೀತೆ ಗಳಾದ ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ಡಾ. ಕೆ.ಎಸ್.ನಿಸಾರ್ ಅಹಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು -ಸಾಮೂಹಿಕ ಗೀತ ಗಾಯನವನ್ನು ಸಹಸ್ರಾರು ಕಂಠಗಳಲ್ಲಿ ಪ್ರಸ್ತುತ ಪಡಿಸಲಾಯಿತು.
Related Articles
Advertisement
ಕೊಂಗಾಡಿಯಪ್ಪ ಪ.ಪೂ ಕಾಲೇಜು: ಕೊಂಗಾಡಿಯಪ್ಪ ಪ.ಪೂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಹಾಡಿ ಗಮನ ಸೆಳೆದರು. ವಿದ್ಯಾಸಂಸ್ಥೆಯ ನಿರ್ದೇಶಕ ಜಗದೀಶ್ ಬಾಬು, ಪ್ರಾಂಶುಪಾಲ ಎನ್.ಆನಂದ ಮೂರ್ತಿ, ಕೊಂಗಾಡಿಯಪ್ಪ ಕಾಲೇಜಿನ ಪ್ರಾಂಶುಪಾಲ ನಾರಾಯಣಸ್ವಾಮಿ, ಕಾಲೇಜಿನ ಹಿರಿಯ ಉಪನ್ಯಾಸಕ ಸತ್ಯನಾರಾಯಣ್, ಎನ್‌ಸಿಸಿ ಅಧಿಕಾರಿ ಎನ್. ಶ್ರೀನಿವಾಸ್, ದೈಹಿಕ ಶಿಕ್ಷಣ ಶಿಕ್ಷಕ ಸಿ.ಕೆ.ಶ್ರೀಕಾಂತ, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಇದನ್ನೂ ಓದಿ:- ನಟ ಪುನೀತ್ ರಾಜಕುಮಾರ್ ಗೆ ಹೃದಯಾಘಾತ: ಆಸ್ಪತ್ರೆಗೆ ಸಿಎಂ ಭೇಟಿ, ವೈದ್ಯರು ಹೇಳಿದ್ದೇನು?
ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ನಗರದ ಹೊರವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಹಾಡಿ ಗಮನ ಸೆಳೆದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಶ್ರೀನಿವಾಸಯ್ಯ ಮಾತನಾಡಿ, ಕನ್ನಡದ ಬಗ್ಗೆ ಎಲ್ಲರೂ ಅಭಿಮಾನ ಮೂಡಿಸಿಕೊಳ್ಳಬೇಕು. ರಾಜ್ಯೋತ್ಸವದ ಅಂಗವಾಗಿ ಇಂದಿನಿಂದ ಕನ್ನಡದಲ್ಲಿಯೇ ಮಾತನಾಡು, ಭಾಷಣ ಸ್ಪರ್ಧೆ, ಗೀತ ಗಾಯನ , ಪ್ರಬಂಧ, ಕನ್ನಡ ಅಂಕಿಗಳನ್ನು ಬರೆಯುವುದು, ಒಗಟು ಬಿಡಿಸುವುದು, ಅಂತ್ಯಾಕ್ಷರಿ ಮೊದಲಾದ ಸ್ಪರ್ಧೆಗಳನ್ನು ಏರ್ಪಡಿಸಿ, ವಿದ್ಯಾರ್ಥಿಗಳಿಗೆ ಕನ್ನಡದ ಬಗ್ಗೆ ಅಭಿಮಾನ ಮೂಡಿಸಲಾಗುತ್ತಿದೆ ಎಂದರು. ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾದ ನರಸಿಂಹಮೂರ್ತಿ ಸೇರಿದಂತೆ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಅರವಿಂದ ವಿದ್ಯಾಸಂಸ್ಥೆ : ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಅರ್ಥಪೂರ್ಣವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಆಯೋಜಿಸಿರುವ ಸಾಮೂಹಿಕ ಗೀತ ಗಾಯನ ಅರ್ಥಪೂರ್ಣವಾಗಿದೆ ಎಂದು ಅರವಿಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಎನ್.ಪ್ರಭುದೇವ್ ತಿಳಿಸಿದರು. ಕಾರ್ಯಕ್ರಮದಲ್ಲಿ ಖಜಾಂಚಿ ಡಿ.ಕೆ. ವೆಂಕಪ್ಪ. ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಸಂಸ್ಥೆಯ ಎಲ್ಲಾ ವಿಭಾಗಗಳ ಉಪನ್ಯಾಸಕರು ಶಿಕ್ಷಕರು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.