ಬದಲಾಯಿಸುವ ಕಾಮಗಾರಿ ನಡೆಯುತ್ತಿದೆ.
Advertisement
ಕಾರ್‌ಸ್ಟ್ರೀಟ್ ಪ್ರದೇಶದಲ್ಲಿ ಈಗಾಗಲೇ ಭೂಗತ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಮಂಗಳಾದೇವಿ ರಸ್ತೆ, ಮಾರ್ನಮಿಕಟ್ಟೆ, ಮೋರ್ಗನ್ಸ್‌ಗೆàಟ್, ರಾಮಕೃಷ್ಣ ಮಠ ರಸ್ತೆ, ನ್ಯೂ ಪಾಂಡೇಶ್ವರ ರೋಡ್ ಪರಿಸರದಲ್ಲಿ ಭೂಗತ ಕೇಬಲ್ ಹಾಕುವ ಕೆಲಸ ಪ್ರಗತಿಯಲ್ಲಿದೆ. ಮಂಗಳಾದೇವಿ ಸುತ್ತ ಮುತ್ತಲ ಪ್ರದೇಶದಲ್ಲಿ ಸುಮಾರು 4 ಕಿ.ಮೀ. ಭೂಗತ ಕೇಬಲ್ ಅಳವಡಿಸಲಾಗುತ್ತಿದೆ. ಮೆಸ್ಕಾಂ ಮೇಲುಸ್ತುವಾರಿಯಲ್ಲಿ ಈ ಕಾಮಗಾರಿ ನಡೆಯುತ್ತಿದೆ.
ಭೂಗತ ಕೇಬಲ್ ಹಾಕುವುದರಿಂದ ರಸ್ತೆಯ ಬದಿ ಮೇಲ್ಭಾಗದಲ್ಲಿ ವಿದ್ಯುತ್ ತಂತಿಗಳು ಜೋತು ಬೀಳುವುದು, ಮಳೆ ಗಾಳಿಗೆ ಮರಗಳು ಬಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವುದು ತಪ್ಪುತ್ತದೆ. ವಿದ್ಯುತ್ ಸಂಬಂಧಿತ ಅವಘಡಗಳೂ ಕಡಿಮೆಯಾಗುತ್ತವೆ. ರಸ್ತೆ ಬದಿ ಅಲ್ಲಲ್ಲಿ ವಿದ್ಯುತ್ ಕಂಬಗಳು ಹಾಗೂ ಮೇಲ್ಭಾಗದಲ್ಲಿ ತಂತಿಗಳು ಇಲ್ಲದಾಗುವುದರಿಂದ ರಸ್ತೆಗಳ ಸೌಂದರ್ಯ ಕೂಡ ಹೆಚ್ಚುತ್ತದೆ. ನಗರದ ಸ್ಮಾರ್ಟ್‌ನೆಸ್ ವರ್ಧನೆ ಆಗು ತ್ತದೆ. ವಿದ್ಯುತ್ ವಿತರಣೆ ಪ್ರಕ್ರಿಯೆಯಲ್ಲಿ ಆಗುತ್ತಿರುವ ನಷ್ಟದ ಪ್ರಮಾಣವನ್ನು ಕಡಿಮೆ ಮಾಡುವಲ್ಲಿಯೂ ಇದು ಪೂರಕವಾಗಿ ಪರಿಣಮಿಸಲಿದೆ.
Related Articles
Advertisement
ಫೆಬ್ರವರಿ 15ರೊಳಗೆ ಕಾಮಗಾರಿ ಪೂರ್ಣಭೂಗತ ವಿದ್ಯುತ್ ಕೇಬಲ್ ಅಳವಡಿಸುವ ಪ್ರದೇಶಗಳಲ್ಲಿ ಓವರ್ ಹೆಡ್ ವಿದ್ಯುತ್ ತಂತಿಗಳು ಇರುವುದಿಲ್ಲ. ಇದರಿಂದಾಗಿ ರಸ್ತೆಗಳು ಸ್ಮಾರ್ಟ್ ಆಗಿ ಕಾಣಿಸುತ್ತವೆ. ಮಂಗಳಾದೇವಿ ಪ್ರದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಭೂಗತ ಕೇಬಲ್ ಹಾಕುವ ಕಾಮಗಾರಿ ಮುಂದಿನ ಫೆಬ್ರವರಿ 15ರೊಳಗೆ ಪೂರ್ತಿಗೊಳ್ಳಲಿದೆ.
– ಅರುಣ್ ಪ್ರಭ ಕೆ.ಎಸ್.,
ಜನರಲ್ ಮ್ಯಾನೇಜರ್, ಮಂಗಳೂರು ಸ್ಮಾರ್ಟ್ ಸಿಟಿ ಲಿ.